ಕ್ಷಯರೋಗ ನಿಯಂತ್ರಣಕ್ಕೆ ಟಾರ್ಗೆಟ್ ರೂಪಿಸಿ:ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಜುಲೈ 15 ರಿಂದ 27 ವರೆಗೆ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ನಡೆಯುವ ಕ್ಷಯರೋಗದ ಪತ್ತೆ ಹಚ್ಚುವಿಕೆಯ ಚಟುವಟಿಕೆಗಳಲ್ಲಿ ನಿರ್ದಿಷ್ಟವಾದ ಟಾರ್ಗೆಟ್‍ನ್ನು ಸಿದ್ಧಪಡಿಸಿಕೊಂಡು ಕಾರ್ಯಕ್ರಮ ರೂಪಿಸಿ, ದಿನ ನಿತ್ಯ ನಡೆಯುವ ಚಟುವಟಿಕೆಗಳ ವರದಿ ತಯಾರಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.     ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು.     ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಕುರಿತು ಮಾಹಿತಿ […]