ದೂರದರ್ಶಿತ್ವದ ಅಭಿವೃದ್ಧಿ ಪರ ಅತ್ಮನಿರ್ಭರ ಬಜೆಟ್: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಂಡಿಸಿರುವ ಕೇಂದ್ರ ಬಜೆಟ್ ದೂರದರ್ಶಿತ್ವದ ಚಿಂತನೆಯೊಂದಿಗೆ ಅಭಿವೃದ್ಧಿ ಪರ ಅತ್ಮನಿರ್ಭರ ಬಜೆಟ್ ಆಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಉತ್ಪಾದಕತೆ, ಹಣಕಾಸು ಹೂಡಿಕೆ, ಹವಾಮಾನ ಕ್ರಮ ಮತ್ತು ಪಿಎಂ ಗತಿಶಕ್ತಿ ಯೋಜನೆ ಈ ನಾಲ್ಕು ಪ್ರಮುಖ ಆಯಾಮಗಳಲ್ಲಿ ರೂಪಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಲಿದೆ. ರಸ್ತೆಗಳ ನಿರ್ಮಾಣಕ್ಕೆ ಒತ್ತು, ಸಣ್ಣ ಉದ್ದಿಮೆಗಳಿಗೆ ಪ್ರೋತ್ಸಾಹ, ಕೈಗಾರಿಕೆ, ಸಾವಯವ ಕೃಷಿ, […]