ಸ್ವ-ಉದ್ಯೋಗ ಆರಂಭಿಸಲು ನಿರುದ್ಯೋಗಿ ಯುವಕ,ಯುವತಿಯರಿಂದ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಸ್ವ-ಉದ್ಯೋಗ ಆರಂಭಿಸಲು ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಗರಿಷ್ಟ ಯೋಜನಾ ವೆಚ್ಚ 25 ಲಕ್ಷ ರೂ. ಉತ್ಪಾದನೆ ಚಟುವಟಿಕೆ ಮತ್ತು 10 ಲಕ್ಷ ರೂ. ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 25 ರಿಂದ 35 ರ […]

ಚುನಾವಣಾ ಸುದ್ದಿಗಳ ಮೇಲೆ ನಿಗಾ: 24*7 ಪರಿಶೀಲನೆ ಕೇಂದ್ರ ಸ್ಥಾಪನೆ

ಉಡುಪಿ: ಲೋಕಸಭಾ ಚುನಾವಣೆಯ ಪ್ರಯುಕ್ತ  ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಎಲ್ಲಾ ಮುದ್ರಣ, ಟಿವಿ, ರೇಡಿಯೋ ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಪ್ರಚಾರವಾಗುವ ರಾಜಕೀಯ ಪಕ್ಷಗಳ ಜಾಹೀರಾತು, ಪ್ರಚಾರ ಕಾರ್ಯಕ್ರಮ, ಸುದ್ದಿಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವ  ಮೀಡಿಯಾ ಮಾನಿಟರಿಂಗ್ ಮತ್ತು ಮೀಡಿಯಾ ಸರ್ಟಿಫಿಕೇಷನ್ (ಎಂಸಿಎಂಸಿ) ಕೇಂದ್ರವನ್ನು ತೆರೆಯಲಾಗಿದ್ದು, ಚುನಾವಣಾ ಸುದ್ದಿಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಎಲ್ಲಾ ಮುದ್ರಣ ಮಾಧ್ಯಮ ಮತ್ತು ಸ್ಥಳೀಯ ಚಾನೆಲ್‍ಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳನ್ನು ವೀಕ್ಷಿಸುವ ಜೊತೆಗೆ […]

ಮರಳು ಹೋರಾಟ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಎಚ್ಚರಿಕೆ, ಮರಳಿನ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಚುನಾವಣೆ ಬಹಿಷ್ಕಾರ ಎದುರಿಸಿ

ಉಡುಪಿ: ಜಿಲ್ಲೆಯ ಮರಳಿನ ಸಮಸ್ಯೆ ಬಗೆಹರಿಯಬೇಕು. ಇಲ್ಲದಿದ್ದರೆ ಮತದಾನ ಪ್ರತಿಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಕಟಪಾಡಿ ಟೆಂಪೋ ಹಾಗೂ ಲಾರಿ ಮಾಲೀಕರ ಸಂಘದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಜಿಲ್ಲಾಡಳಿತ ಮರಳು ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಇಲ್ಲದಿದ್ದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತೇವೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು. ಮತ ಹಾಕುವುದು ಬಿಡುವುದು ನಮ್ಮ ವೈಯಕ್ತಿಕ ವಿಚಾರ. ಮತ ಹಾಕದಿದ್ದರೆ ನಿಮ್ಮ ಮೇಲೆ ಕ್ರಮ ಜರುಗಿಸುತ್ತೇನೆ ಎಂದು ಡಿಸಿ ಹೇಳುತ್ತಾರೆ. […]