ಜಿಲ್ಲೆಯಾದ್ಯಂತ 55 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ- 13,235 ವಿದ್ಯಾರ್ಥಿಗಳು ಹಾಜರು, 75 ಗೈರು

ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದ್ದು ಮೊದಲ ದಿನ ಯಾವುದೇ ಗೊಂದಲಗಳು ಇಲ್ಲದಂತೆ ನಡೆಯಿತು. 55 ಪರೀಕ್ಷಾ ಕೇಂದ್ರಗಳಲ್ಲಿ ಮಾತೃ ಭಾಷೆ ವಿಷಯದಲ್ಲಿ ನಡೆದ ಪರೀಕ್ಷೆಯಲ್ಲಿ 13,235 ವಿದ್ಯಾರ್ಥಿಗಳು ಹಾಜರಾಗಿದ್ದರು.75 ಮಂದಿ ಗೈರಾಗಿದ್ದರು. ಬೆಳಿಗ್ಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಉಡುಪಿಯ ಬೋರ್ಡ್ ಹೈಸ್ಕೂಲ್ ಪರೀಕ್ಷಾ ಕೇಂದ್ರಕ್ಕೆ ಭೇಟಿನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ಡಿಡಿಪಿಐ ಗಣಪತಿ, ಡಯಟ್ ಅಧಿಕಾರಿ ಡಾ.ಅಶೋಕ್ ಕಾಮತ್ ಇದ್ದರು. ಮೊದಲ ದಿನದ ಪರೀಕ್ಷೆಯಲ್ಲಿ […]