ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ ಡಾ. ಸುಬ್ರಹ್ಮಣ್ಯ ಭಟ್ ನೇಮಕ

ಉಡುಪಿ: ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಚಿಂತನೆಗಳನ್ನು ಬೆಳೆಸುವುದರ ಜೊತೆಗೆ ಮೌಢ್ಯವನ್ನು ದೂರ ಮಾಡುವ ಮತ್ತು ಹಲವಾರು ಪ್ರಗತಿಪರ ಯೋಜನೆಗಳನ್ನು ಕಾರ್ಯಾನುಷ್ಠಾನ ಮಾಡುವ ಉದ್ದೇಶದಿಂದ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ ಡಾ. ಸುಬ್ರಹ್ಮಣ್ಯ ಭಟ್ ಬೈಂದೂರು ಆಯ್ಕೆಯಾಗಿದ್ದಾರೆ. ರಾಜ್ಯದಾದ್ಯಂತ ಕ್ರಿಯಾಶೀಲವಾಗಿರುವ ಕ.ರಾ.ವೈ.ಸಂ.ಪರಿಷತ್ತು ರಾಜ್ಯಾಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ಅವರ ಮಾರ್ಗದರ್ಶನದಲ್ಲಿ ಜನಸಾಮಾನ್ಯರಲ್ಲೂ ವೈಜ್ಞಾನಿಕ ಚಿಂತನೆಯನ್ನು ಹುಟ್ಟುಹಾಕಿ ಜಾಗೃತಿ ಮೂಡಿಸುವಲ್ಲಿ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಇತ್ತೀಚೆಗೆ ಉಡುಪಿಯಲ್ಲಿ ನಡೆದ ಸಂಘಟನೆಯ ಸದಸ್ಯರ ಸಭೆಯಲ್ಲಿ ವೃತ್ತಿಯಲ್ಲಿ ವೈದ್ಯರಾಗಿ, […]