ಆರ್ಯುವೇದ ಎನ್ನುವುದು ಜೀವನಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆ

ಉಡುಪಿ: ಆರ್ಯುವೇದಕ್ಕೆ ಮನುಷ್ಯನ ಪಂಚೇಂದ್ರಿಯಗಳನ್ನು ನಿಯಂತ್ರಿಸುವ ಶಕ್ತಿಯಿದೆ. ಆರ್ಯುವೇದವನ್ನು ಚಿಕಿತ್ಸಾ ಪದ್ಧತಿಗಿಂತಲೂ ಜೀವನ ಕ್ರಮವೆಂದು ಪರಿಗಣಿಸಲಾಗುತ್ತದೆ ಎಂದು ಧಾರವಾಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಕುತ್ಪಾಡಿ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಶನಿವಾರ ನಡೆದ ಕಾಲೇಜಿನ ವಿಶಿಖಾನುಪ್ರವೇಶ- ಪದವಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲೋಪತಿ ವೈದ್ಯಕೀಯ ಪದ್ಧತಿಯಲ್ಲಿ ಆಹಾರದ ಕ್ರಮದಲ್ಲಿ ಯಾವುದೇ ಬದಲಾವಣೆಯನ್ನು ಅವರು ಪರಿಗಣಿಸುವುದಿಲ್ಲ. ಇದರಿಂದ ರೋಗಗಳು ಮತ್ತೆ ಉಲ್ಬಣಿಸುವ ಸಾಧ್ಯತೆಗಳಿರುತ್ತದೆ. […]