ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ದ್ವೇಷ ರಾಜಕೀಯದ ಕೈಗನ್ನಡಿ; ವೆರೋನಿಕಾ ಕರ್ನೇಲಿಯೋ

ಉಡುಪಿ: ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮುಖ್ಯಮಂತ್ರಿಗೆ ಸಲಹೆ ಮಾಡಿರುವುದು ದ್ವೇಷ ರಾಜಕೀಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್‌ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಬಡವರ ಹಸಿವು ನೀಗಿಸುವ ನಿಟ್ಟಿನಲ್ಲಿ ಇಂದಿರಾ ಕ್ಯಾಂಟಿನ್‌ ಆರಂಭಿಸಿದ್ದು, ಉತ್ತಮ ಸೇವೆ‌ ನೀಡುತ್ತಿದೆ. ಸಿದ್ದರಾಮಯ್ಯ ಅವರ ದೂರದೃಷ್ಟಿಯ ಫಲವಾಗಿ ಬಡವರು ಮತ್ತು ಮಧ್ಯಮ ವರ್ಗದವರು ಕನಿಷ್ಠ ಹಣದಲ್ಲಿ ಉತ್ತಮ ಆಹಾರ ಪಡೆಯುವ ಯೋಜನೆಗೆ ಇಂದಿರಾ ಕ್ಯಾಂಟಿನ್‌ […]