ಉಡುಪಿ: ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ: ಆಸಕ್ತರು ಪಾಲ್ಗೊಳ್ಳಿ

ಉಡುಪಿ: ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಮತ್ತು ಭಾರತೀಯ ವಿಕಾಸ್ ಟ್ರಸ್ಟ್, ಮಣಿಪಾಲ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ  ಸ್ವ-ಉದ್ಯೋಗ ಕೈಗೊಳ್ಳಲು ಆಸಕ್ತ ಅಭ್ಯರ್ಥಿಗಳಿಗೆ, ಆಗಸ್ಟ್ 23 ರಿಂದ ಸೆಪ್ಟಂಬರ್ 01 ರವರೆಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಭಾರತೀಯ ವಿಕಾಸ್ ಟ್ರಸ್ಟ್, ಪೆರಂಪಳ್ಳಿ, ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ಸ್ವ-ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮ ನಿರ್ವಹಣೆ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಇತ್ಯಾದಿ ವಿಷಯಗಳ ಕುರಿತು ಅಭ್ಯರ್ಥಿಗಳಿಗೆ ಮಾಹಿತಿಗಳನ್ನು ನೀಡಲಾಗುತ್ತಿದ್ದು, 18-40 ವರ್ಷ […]