ಉಡುಪಿ ತಾಪಂ: ನೂತನ ಅಧ್ಯಕ್ಷರಾಗಿ ಸಂಧ್ಯಾ ಕಾಮತ್, ಉಪಾಧ್ಯಕ್ಷರಾಗಿ ಶರತ್ ಕುಮಾರ್ ಬೈಲಕೆರೆ ಅವಿರೋಧವಾಗಿ ಆಯ್ಕೆ
ಉಡುಪಿ: ಉಡುಪಿ ತಾಲ್ಲೂಕು ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಂಧ್ಯಾ ಕಾಮತ್ ಹಾಗೂ ಉಪಾಧ್ಯಕ್ಷರಾಗಿ ಶರತ್ ಕುಮಾರ್ ಬೈಲಕೆರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಕುಂದಾಪುರ ಸಹಾಯಕ ಕಮಿಷನರ್ ರಾಜು ಅಧಿಕೃತವಾಗಿ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಉಡುಪಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ರಾಜ್ ಹಾಗೂ ಅವಿಭಜಿತ ಉಡುಪಿ , ಕಾಪು ಮತ್ತು ಬ್ರಹ್ಮಾವರ ತಾಲ್ಲೂಕು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.