ಉಡುಪಿ ಎಸ್ಪಿ ಫೋನ್ ಇನ್ ಕಾರ್ಯಕ್ರಮ:ದೂರು ನೀಡಿ ಗಮನ ಸೆಳೆದ ಜಿಲ್ಲೆಯ ಸಾರ್ವಜನಿಕರು

ಉಡುಪಿ: ಜಿಲ್ಲಾಡಳಿತದ ಸೂಚನೆಯಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಆರ್‌ಟಿಓ,ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುವ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಹೇಳಿದರು.ಅವರು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್ ಇನ್‌ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕರೆಗಳನ್ನು ಸ್ವೀಕರಿಸಿ ಮಾತನಾಡಿದರು. ಅಪಘಾತಗಳ ಸಂಖ್ಯೆ ಕಡಿಮೆ ಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದಕ್ರಮಗಳ ಬಗ್ಗೆ ಪಟ್ಟಿ ಮಾಡಲಾಗಿದೆ. ಈ ವರದಿಯನ್ನು ಪ್ರಾಧಿಕಾರ ಹಾಗೂ ಆರ್‌ಟಿಓಗೆಸಲ್ಲಿಸಲಾಗಿದೆ. […]