ಚುನಾವಣೆ ಮುಗಿದ ನಂತರ ಎರಡು ದಿನಕ್ಕೊಮ್ಮೆ ನೀರು ಪೂರೈಕೆ..!!

ಉಡುಪಿ: ನಗರಕ್ಕೆ ನೀರು ಪೂರೈಸುವ ಹಿರಿಯಡಕ ಸ್ವರ್ಣ ನದಿ ಬಜೆ ಡ್ಯಾಂನಲ್ಲಿ ನೀರು ಬರಿದಾಗುತ್ತಿದೆ. ಇನ್ನೂ 10 ದಿನಕ್ಕೆ ಪಂಪ್‌ ಮಾಡುವಷ್ಟು ನೀರಿನ ಪ್ರಮಾಣ ಲಭ್ಯವಿದೆ. ದಿನೇದಿನೇ ಬಿಸಿಲ ಪ್ರಮಾಣಕ್ಕೆ ನೀರಿನ ಮೂಲಗಳು ಬತ್ತುತ್ತಿವೆ. ಮಳೆ ಬಾರದಿದ್ದಲ್ಲಿ ನಗರದಲ್ಲಿಯೂ ನೀರಿಗೆ ಆಹಕಾರ ಸೃಷ್ಟಿಯಾಗುವ ಸಾಧ್ಯತೆ ಇದೆ. ಚುನಾವಣೆ ಮುಗಿದ ಕೂಡಲೆ ಮೇ 10ರ ಅನಂತರ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಬಹುದು ಎಂದು ನಗರಸಭೆ ಮೂಲಗಳು ತಿಳಿಸಿದೆ. ಪ್ರಸ್ತುತ ಬಜೆ ಡ್ಯಾಂನಲ್ಲಿ 3 ಮೀ. ನಷ್ಟು ನೀರಿದೆ. […]

ಉಡುಪಿ: ಕುಡಿಯುವ ನೀರಿನ ಸಮಸ್ಯೆ ಉಲ್ಬಣ..!!

ಉಡುಪಿ: ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಗ್ರಾಮೀಣ ಭಾಗದಲ್ಲಿ ವಾರಕ್ಕೆ 2 ಎರಡು ದಿನ ನೀರು ಪೂರೈಕೆಯೂ ಕಷ್ಟವಾಗುತ್ತಿದೆ. ನಗರ ಪ್ರದೇಶದ ಪರಿಸ್ಥಿತಿಯೂ ಭಿನ್ನವಾಗಿಲ್ಲ. ಜಿಲ್ಲೆಯ 155 ಗ್ರಾ.ಪಂ.ಗಳಲ್ಲಿ 46 ಗ್ರಾ.ಪಂಗಳು ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿವೆ. ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಅನುದಾನದ ಕೊರತೆಯಿಂದ ಕೆಲವು ಗ್ರಾ.ಪಂ.ಗಳಿಗೆ ಟ್ಯಾಂಕರ್‌ ಮೂಲಕ ಕುಡಿಯುವ ನೀರಿನ ಪೂರೈಕೆಯೂ ಕಷ್ಟವಾಗುತ್ತಿದೆ. ಟ್ಯಾಂಕರ್‌ ಮೂಲಕ ನೀರು ಪೂರೈಕೆಗೆ ಸರಕಾರದಿಂದ ಅನುದಾನ ಬರುತ್ತಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಬರಪೀಡಿತ ತಾಲೂಕುಗಳ ಘೋಷಣೆಯೂ […]