ಲೋಕಸಭಾ ಚುನಾವಣೆ: ಬೈಂದೂರು ಕ್ಷೇತ್ರದಲ್ಲಿ ಹಲವೆಡೆ ಬಿರುಸಿನ ಮತದಾನ

ಕುಂದಾಪುರ: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಕ್ಷೇತ್ರದಲ್ಲಿ ಬೆಳಗ್ಗೆಯಿಂದ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವುದು ಕಂಡುಬಂದಿದೆ. ಹೆಮ್ಮಾಡಿ, ವಂಡ್ಸೆ ಸೇರಿದಂತೆ ಕೆಲವು ಕಡೆಗಳಲ್ಲಿ ಇವಿಎಂ ಸಮಸ್ಯೆಯಿಂದ ಮತದಾನ ಅರ್ಧಗಂಟೆಗಳ ಕಾಲ ತಡವಾಗಿ ಆರಂಭಗೊಂಡಿತ್ತು. ಹೆಮ್ಮಾಡಿ ಸಖಿ ಮತಗಟ್ಟೆಯಲ್ಲಿ ಇವಿಎಂ ದೋಷದಿಂದ ಮತದಾನ ವಿಳಂಬವಾಗಿದ್ದು ಸುಮಾರು ಮುಕ್ಕಾಲು ಗಂಟೆ ತಡವಾಗಿ ಆರಂಭಗೊಂಡ ಮತದಾನ ಪ್ರಕ್ರಿಯೆಯಿಂದ ಮತದಾರರು ಇರುಸುಮುರುಸುಗೊಂಡರು. ಇನ್ನು ಮತಯಂತ್ರದ ಬಳಿ ಬೆಳಕಿನ ಕೊರತೆಯಿಂದಾಗಿ ಕೆಲವು ಚಿಹ್ನೆ ಕಾಣಿಸದೆ […]