ಲಿಂಗತ್ವ ಅಲ್ಪಸಂಖ್ಯಾತರ ಬಗೆಗಿನ ಸಮಾಜದ ದೃಷ್ಟಿ ಬದಲಾಗಬೇಕು-ಸಿ.ಎಂ. ಜೋಷಿ

ಉಡುಪಿ: ಸಮಾಜದಲ್ಲಿ ಇರುವ ಎಲ್ಲರಿಗೂ ಕಾನೂನು ಅನ್ವಯವಾಗುತ್ತದೆ. ಆದರೂ ನಮ್ಮ ಸಮಾಜದಲ್ಲಿ ಅನೇಕ ಓರೆಕೋರೆಗಳಿದ್ದು, ಇದನ್ನು ಸರಿಮಾಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಲಿಂಗತ್ವ ಅಲ್ಪಸಂಖ್ಯಾತರ ಬಗೆಗಿನ ಸಮಾಜದ ದೃಷ್ಟಿ ಬದಲಾಗಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ. ಜೋಷಿ ಹೇಳಿದರು. ಅವರು ಬುಧವಾರ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ (ರಿ)ಉಡುಪಿ, ಆಶ್ರಯ ಸಮುದಾಯ […]