Tag: #udupixpress #dr.purushotam #bilimale #tulu
-
8ನೇ ಪರಿಚ್ಛೇದಕ್ಕೆ ಸೇರಿದ ಭಾಷೆಗೆ ಸಿಗಬಹುದಾದ ಪ್ರಯೋಜನಗಳನ್ನು ಸರಕಾರ ಕಡಿತಗೊಳಿಸುತ್ತಿದೆ: ಬಿಳಿಮಲೆ
ಉಡುಪಿ: ಸಂವಿಧಾನದ 8ನೇ ಪರಿಚ್ಛೇದಕ್ಕೆ ಒಂದು ಭಾಷೆ ಸೇರಿದರೆ, ಅದರಿಂದ ಸಿಗಬಹುದಾದ ಪ್ರಯೋಜಗಳನ್ನು ಸರ್ಕಾರ ಒಂದೊಂದಾಗಿ ಕಡಿತಗೊಳಿಸುತ್ತಿದೆ. ಒಂದು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಿ ಗಟ್ಟಿಗೊಳಿಸುವ ಬದಲು ಅದನ್ನು ನಿರ್ಜಿವಗೊಳಿಸುವ ಪ್ರಯತ್ನ ಆಗುತ್ತಿದೆ. ವಾಜಪೇಯಿ ಪ್ರದಾನಿಯಾಗಿದ್ದಾಗ ತುಳು ಹೊರತುಪಡಿಸಿ ಉಳಿದ ನಾಲ್ಕು ಭಾಷೆಗಳನ್ನು ಮಾತ್ರ ಸೇರಿಸಲಾಯಿತು ಎಂದು ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ, ಜಾನಪದ ತಜ್ಞ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು. ಅವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಮತ್ತು…