ಮತ ಪ್ರಮಾಣ ಸಂಗ್ರಹದಲ್ಲಿ ಎಚ್ಚರ ವಹಿಸಿ- ಉಡುಪಿ ಜಿಲ್ಲಾಧಿಕಾರಿ

 ಉಡುಪಿ: ಏಪ್ರಿಲ್ ೧೮ ರಂದು ನಡೆಯುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪ್ರತಿ ಮತಗಟ್ಟೆಯಿಂದ ಮತದಾನದ ಪ್ರಮಾಣವನ್ನು ಸಂಗ್ರಹಿಸುವಾಗ ಅತ್ಯಂತ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಲೋಕಸಬಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಸಂಗ್ರಹ ಸಂಗ್ರಹಿಸಲು ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಡೆದ ತರಬೇತಿ ಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮತದಾನ ಪ್ರಾರಂಭವಾಗುವ ಹಿಂದಿನ ದಿನದಂದು, ಮಸ್ಟರಿಂಗ್ ಕೇಂದ್ರಗಳಿಗೆ ಎಲ್ಲಾ ಸಿಬ್ಬಂದಿ ತೆರಳಿದ ಬಗ್ಗೆ ಮತ್ತು […]