ಮಂಗಳೂರು: ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜು: ವನ ಮಹೋತ್ಸವ ಕಾರ್ಯಕ್ರಮ

ಮಂಗಳೂರು: ಎಕ್ಸ್‌ಪರ್ಟ್ ಪದವಿ ಪೂರ್ವಕಾಲೇಜು, ಮಂಗಳೂರು ಇಲ್ಲಿ ವನ ಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ವತಿಯಿಂದ ಸುಮಾರು 2000 ಸ್ಥಳೀಯ ಜಾತಿಯ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮಕ್ಕೆ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪ್ರೊ.ನರೇಂದ್ರಎಲ್.ನಾಯಕ್‌ ಚಾಲನೆ ನೀಡಿದರು. ಸಂಸ್ಥೆಯ ಉಪಾಧ್ಯಕ್ಷರಾದ ಡಾ.ಉಷಾಪ್ರಭಾ ಎನ್.ನಾಯಕ್‌ ಅವರು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಲಯ ಅರಣ್ಯಾಧಿಕಾರಿ ಶ್ರೀಧರ್ ‌ ಉಪಸ್ಥಿತರಿದ್ದರು. ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಕ ಅಂಕುಶ್‌ಎನ್. ನಾಯಕ್, ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಕೆ.ವಿಜಯನ್‌ ಸೇರಿದಂತೆ ಗಣ್ಯರು ಗಿಡಗಳನ್ನು ನೆಟ್ಟರು. […]