ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಸಚಿವ ಕೋಟ
ಮಂಗಳೂರು: ಜಿಲ್ಲೆಯ ಎಲ್ಲಾ ಮೆಡಿಕಲ್ ಕಾಲೇಜುಗಳ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸೋಮವಾರ ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಹಾಗೂ ಸಾಮಾರ್ಥ್ಯವನ್ನು ಪರಿಶೀಲಿಸಿ ಅವರು ಮಾತನಾಡಿದರು. ಬಿಪಿಎಲ್, ಎಪಿಎಲ್ ಕುಟುಂಬಗಳು, ವಲಸೆ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಚಿಕಿತ್ಸೆ ದೊರೆಯಲಿದೆ. ರೋಗಿಗಳು ಆಸ್ಪತ್ರೆಯಲ್ಲಿ ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು. ವೆನ್‍ಲಾಕ್ ಆಸ್ಪತ್ರೆಯಲ್ಲಿ ಕೂಡ ಉಚಿತ ಚಿಕಿತ್ಸೆ ಮುಂದುವರಿಯಲಿದೆ. […]