ದ.ಕ: ಭಾರೀ ಮಳೆ ಹಿನ್ನೆಲೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚನೆ

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಹಿನ್ನೆಲೆ ಕರಾವಳಿಯ ನದಿಗಳು ಉಕ್ಕಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿದ್ದು, ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಮನೆಗಳು ಜಲವೃತವಾಗಿದೆ. ನದಿ ಸಮೀಪದ ಹಲವು ಮನೆಗಳಿಗೆ ನೀರು ನುಗ್ಗಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಅಲಡ್ಕ ಪಡ್ಪು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಕೆಲವು ಭಾಗದಲ್ಲಿ ಜನತೆ ಅತಂಕದಲ್ಲಿದ್ದು, ನದಿ ಸಮೀಪ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.