ನಗರಾಭಿವೃಧ್ದಿ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗಳಿಸಿ:ಸಚಿವ ಬಿ.ಎ.ಬಸವರಾಜ್

ಉಡುಪಿ: ಜಿಲ್ಲೆಯಲ್ಲಿ ನಗರಾಭಿವೃದ್ದಿ ಇಲಾಖೆಯ ಮೂಲಕ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಮುಕ್ತಾಯಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿ, ಕಾಮಗಾರಿಗಳ ವಿಳಂಬಕ್ಕೆ ಆಸ್ಪದ ನೀಡಬೇಡಿ ರಾಜ್ಯದ ನಗರಾಭಿವೃದ್ದಿ ಸಚಿವ ಬಿ.ಎ.ಬಸವರಾಜ್ ಸೂಚಿಸಿದ್ದಾರೆ. ಅವರು ಸೋಮವಾರ, ಉಡುಪಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಾಪುರ ಪಟ್ಟಣದ ಒಳಚರಂಡಿ ಯೋಜನೆ 2017 ಕ್ಕೆ ಮುಕ್ತಾಯಗೊಳ್ಳಬೇಕಾಗಿದ್ದು, […]