ಉಡುಪಿ: ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ವಾರದೊಳೆಗೆ ಕ್ರಮಕೈಗೊಳ್ಳುವ ಭರವಸೆ
ಉಡುಪಿ: ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅವರು ಈ ಬಗ್ಗೆ ಒಂದು ವಾರದೊಳಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಕಾಪು ಶಾಸಕ ಲಾಲಾಜಿ ಮೆಂಡನ್ ಹೇಳಿದರು. ಉಡುಪಿ ತಾ.ಪಂ. ಸಭಾಂಗಣದಲ್ಲಿ ಬುಧವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಅವರು ತಿಳಿಸಿದರು. ಸದಸ್ಯೆ ನಳಿನಿ ಪ್ರದೀಪ್ ರಾವ್ ವಿಷಯ ಪ್ರಸ್ತಾಪಿಸಿ, ರಾಷ್ಟ್ರೀಯ ಹೆದ್ದಾರಿಯ ಸಂತಕಟ್ಟೆಯಿಂದ ಕಲ್ಯಾಣಪುರ ಸೇತುವೆ ವರೆಗಿನ ಭಾಗದಲ್ಲಿ ಅಲ್ಲಲ್ಲಿ ಗುಂಡಿ ಬಿದ್ದು ರಸ್ತೆ ಹಾಳಾಗಿದೆ. ಮಲ್ಲಿಕಾರ್ಜುನ ದೇವಸ್ಥಾನದ ಸಮೀಪ […]