ವಸತಿ ಯೋಜನೆಯಡಿಯಲ್ಲಿ ಮನೆ ನಿರ್ಮಿಸಲು ಸಹಾಯಧನ- ಅರ್ಜಿ ಆಹ್ವಾನ
ಉಡುಪಿ :ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವ ವಸತಿ ರಹಿತ ಕುಟುಂಬಗಳಿಗೆ ಸರ್ಕಾರದ ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿಯಲ್ಲಿ ಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಹ ಕುಟುಂಬಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ 2018-19 ನೇ ಸಾಲಿಗೆ 19 ಮತ್ತು 2019-20 ನೇ ಸಾಲಿಗೆ 9 ಮನೆಗಳ ಗುರಿ ನಿಗಧಿಪಡಿಸಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯಡಿಯಲ್ಲಿ 2019-20 ನೇ ಸಾಲಿಗೆ 10 ಮನೆಗಳ […]