ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಬೇಕು: ಡಾ. ನಿಕೇತನ

ಉಡುಪಿ: ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಯಲ್ಲಿ‌ ತೊಡಗುವ ಜತೆಗೆ, ಮಹಿಳೆಯರನ್ನು ಸಶಕ್ತಗೊಳಿಸಬೇಕು. ಮಹಿಳೆಯರು ಸ್ವಾವಲಂಬಿಗಳಾಗುವುದರ ಜತೆಗೆ ಇತರರಿಗೆ ಸಹಾಯ ಹಸ್ತ ಚಾಚುವ ಕೈಗಳಾಗಬೇಕು ಎಂದು ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಹೇಳಿದರು.ಉಡುಪಿಯ ಅಜ್ಜರಕಾಡು ಮಹಿಳಾ ಸಮಾಜದಲ್ಲಿ ಭಾನುವಾರ ಸಾ-ಫಲ್ಯ ಟ್ರಸ್ಟ್‌ ಉದ್ಘಾಟಿಸಿ ಮಾತನಾಡಿದರು.ದುಡಿಯುವ ಕೈಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಹಾಕಿಕೊಳ್ಳಬೇಕು. ಸೊರಗುತ್ತಿರುವ ಮನಸ್ಸಿಗಳಿಗೆ ಒಳ್ಳೆಯ ವಿಚಾರಗಳನ್ನು ನೀಡಬೇಕು ಎಂದರು.ಸಾಫಲ್ಯ ಟ್ರಸ್ಟ್‌ ಅಧ್ಯಕ್ಷೆ ನಿರುಪಮಾ ಪ್ರಸಾದ್‌ ಶೆಟ್ಟಿ ಮಾತನಾಡಿ, ಸಾಮಾಜಿಕ ಕಾರ್ಯ, ಬಡವರಿಗೆ ನೆರವು […]