ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‌ಗೆ ಕೊರೋನಾ ಸೋಂಕು

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್ ಗಂಭೀರ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣದ ಬರೆದುಕೊಂಡಿರುವ ಗಂಭೀರ್ ಅವರು, ತಾವು ಕೊರೋನಾ ಸೋಂಕಿತನಾಗಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಗೌತಮ್ ಗಂಭೀರ್ ಅವರನ್ನು ಹೊಸ ಐಪಿಎಲ್ ತಂಡವಾದ ಲಕ್ನೋದ ಮೆಂಟರ್ ಆಗಿ ಆಯ್ಕೆ ಮಾಡಲಾಗಿದೆ. ಈ ವೇಳೆ, ಕೋವಿಡ್ ಸೋಂಕಿಗೆ ತುತ್ತಾಗಿರುವ ಮಾಜಿ ಆಟಗಾರ ಗಂಭೀರ್, ಚಿಕಿತ್ಸೆ ಪಡೆಯುತ್ತಿದ್ದಾರೆ.