ಕೆಳಹಂತದ ಮೂಲಕ ಬದಲಾವಣೆ ಸಾಧ್ಯವಾದಾಗ ದೇಶದ ಅಭಿವೃದ್ಧಿ: ಸಿಂಧೂ ರೂಪೇಶ್

ಉಡುಪಿ: ಕೆಳ ಹಂತಗಳಲ್ಲಿ ಬದಲಾವಣೆಗಳು ಆಗಬೇಕು. ಒಂದೊಂದು ಗ್ರಾಮಗಳು ಅಭಿವೃದ್ಧಿಗೊಂಡಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಹೇಳಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ.ಜಿಲ್ಲಾ ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್ ಹಾಗೂ ಮಡಪ್ಪಾಡಿ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ನಡೆದ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನಸಾಮಾನ್ಯರು ಪತ್ರಕರ್ತರಲ್ಲಿ ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರ […]