ಕುಂದಾಪುರ: ಹಿಂದೂ ರುದ್ರಭೂಮಿಯಲ್ಲಿ ಸಾರ್ವಜನಿಕ ತೆರೆದ ಬಾವಿ ನಿರ್ಮಾಣ: ಸ್ಥಳೀಯರಿಂದ ಭಾರೀ ವಿರೋಧ

ಕುಂದಾಪುರ: ಜಿಲ್ಲಾ ಪಂಚಾಯತ್ ಅನುದಾನದಡಿಯಲ್ಲಿ ಇಲ್ಲಿನ ಹೆಮ್ಮಾಡಿ ಸಮೀಪದ ಸಂತೋಷನಗರ ಹಿಂದೂ ರುದ್ರಭೂಮಿ ಆವರಣದೊಳಗೆ ನಿರ್ಮಾಣಗೊಳ್ಳುತ್ತಿರುವ ಸಾರ್ವಜನಿಕ ತೆರೆದ ಬಾವಿಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೆಮ್ಮಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ನಿವಾಸಿಗಳಿಗೆ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಸುಮಾರು ಏಳು ಲಕ್ಷ ರೂಪಾಯಿ ವೆಚ್ಚದ ಜಿಲ್ಲಾ ಪಂಚಾಯತ್ ಅನುದಾನದಡಿಯಲ್ಲಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ತೆರೆದ ಬಾವಿಗೆ ಇದೀಗ ಅಪಸ್ವರಗಳು ಎದ್ದಿದ್ದು, ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸ್ಥಳೀಯರು ಸೋಮವಾರ ಸ್ಥಳಕ್ಕೆ ತೆರಳಿ ಕಾಮಗಾರಿಯನ್ನು ಕೂಡಲೇ ನಿಲ್ಲಿಸುವಂತೆ ಎಚ್ಚರಿಕೆ ನೀಡಿದ್ದಾರೆ. […]

ರಾಹುಲ್ ಗಾಂಧಿ ತಮ್ಮ ತಾಯಿಯನ್ನು ಬಿಟ್ಟು ಕೇರಳಕ್ಕೆ ಬರಬಾರದಿತ್ತು:ಬಿ.ವೈ ರಾಘವೇಂದ್ರ

ಕುಂದಾಪುರ: ಅಮೇಠಿಯಲ್ಲಿ ತಾನು ಗೆಲ್ಲುವುದಿಲ್ಲ ಎಂಬ ವರದಿಯ ನಂತರ ರಾಹುಲ್ ಗಾಂಧಿ ತಮ್ಮ ತಾಯಿ ಒಬ್ಬರನ್ನೇ ಬಿಟ್ಟು ಕೇರಳಕ್ಕೆ ವಲಸೆ ಬಂದಿದ್ದಾರೆ. ಇಂತಹ ಸಂದರ್ಭದಲ್ಲಿ ರಾಹುಲ್ ಗಾಂಧಿ ತಾಯಿ ಒಬ್ಬರನ್ನೆ ಬಿಟ್ಟು ಬರಬಾರದಿತ್ತು. ಅವರನ್ನೂ ವಯನಾಡುಗೆ ಕರೆದುಕೊಂಡು ಬರಬೇಕಿತ್ತು ಎಂದು ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ವ್ಯಂಗ್ಯವಾಡಿದರು. ಅವರು ಮಂಗಳವಾರ ಮಧ್ಯಾಹ್ನ ನೆಂಪುವಿನಲ್ಲಿರುವ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿಯವರ ಮನೆಯಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸಚಿವ ರೇವಣ್ಣ ಯಾವಾಗಲೂ ಕೈಯ್ಯಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು […]

ಬೈಕ್ ಗೆ ಡಿಕ್ಕಿಯಾದ ಟೆಂಪೋ: ಕುಂದಾಪುರದ ಹೆಡ್ ಕಾನ್‌ಸ್ಟೇಬಲ್ ದಾರುಣ ಸಾವು

ಕುಂದಾಪುರ: ಭಾನುವಾರ ರಾತ್ರಿ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಂದಾಪುರ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಚಂದ್ರಶೇಖರ್(೪೨) ಸೋiವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.  ಕರ್ತವ್ಯದ ನಿಮಿತ್ತ ಬ್ರಹ್ಮಾವರದಿಂದ ಕುಂದಾಪುರದತ್ತ ಚಂದ್ರಶೇಖರ್ ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆ ಬಳಿ ಹಿಂಬದಿಯಿಂದ ಟೆಂಪೋ ಡಿಕ್ಕಿ ಹೊಡೆದಿತ್ತು. ಓವರ್‌ಟೇಕ್ ಭರದಲ್ಲಿ ಟೆಂಪೋ ಚಾಲಕ ಚಂದ್ರಶೇಖರ್ ಚಲಾಯಿಸುತ್ತಿದ್ದ ಬೈಕಿಗೆ ಗುದ್ದಿ ಪರಾರಿಯಾಗಿದ್ದನು. ಅಪಘಾತದಿಂದ ಚಂದ್ರಶೇಖರ್ ರಸ್ತೆಗೆ ಬಿದ್ದು ಕುತ್ತಿಗೆ ಹಾಗೂ ತಲೆಗೆ ಗಂಭೀರ […]

ಕುಂದಾಪುರ: ಆಸ್ತಿ ತೆರಿಗೆ ಪಾವತಿಸಲು ಸೂಚನೆ

ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯ ಎಲ್ಲಾ ವಾಸ್ತವ್ಯ ಮತ್ತು ವಾಣಿಜ್ಯ ಕಟ್ಟಡಗಳ ಮಾಲಕರು ತಮ್ಮ ಕಟ್ಟಡಗಳ 2019-20 ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರ ಒಳಗೆ ಪಾವತಿಸಿ, ಆಸ್ತಿ ತೆರಿಗೆ ಮೇಲೆ ಶೇ.5 ರಿಯಾಯಿತಿ ಪಡೆಯಬಹುದಾಗಿದೆ. ಜೂನ್ 30 ರ ತನಕ ಬಡ್ಡಿ ರಹಿತವಾಗಿ ಆಸ್ತಿ ತೆರಿಗೆ ಪಾವತಿಸಲು ಕೊನೆಯ ದಿನವಾಗಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಜುಲೈ 1 ರ ನಂತರ ಆಸ್ತಿ ತೆರಿಗೆ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ. 2 […]