ಮಂಗಳೂರು: ಆಶಾ ಕಾರ್ಯಕರ್ತೆಗೆ ಕರ್ತವ್ಯಕ್ಕೆ ಅಡ್ಡಿ; ಇಬ್ಬರು ಎಸ್ ಡಿಪಿಐ ಕಾರ್ಯಕರ್ತರ ಬಂಧನ
ಮಂಗಳೂರು: ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮನೆ ಮನೆ ಭೇಟಿಯಲ್ಲಿದ್ದ ಆಶಾ ಕಾರ್ಯಕರ್ತೆಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರು ಎಸ್‌ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಲ್ಲೂರು ಬದ್ರಿಯಾ ನಗರ ನಿವಾಸಿಗಳಾದ ಇಸ್ಮಾಯಿಲ್ ಮತ್ತು ಅಶ್ರಫ್ ಬಂಧಿತರು. ವಸಂತಿ ಎಂಬ ಆಶಾ ಕಾರ್ಯಕರ್ತೆ ಮನೆ ಭೇಟಿಗೆ ತೆರಳಿದ್ದ ವೇಳೆ ಇಬ್ಬರೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಕರ್ತವ್ಯ ನಿರ್ವಹಿಸದಂತೆ ತಡೆದಿದ್ದ ಆರೋಪಿಗಳು, ಆಶಾ ಕಾರ್ಯಕರ್ತೆಗೆ ಬೆದರಿಕೆಯನ್ನೂ ಹಾಕಿದ್ದರು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ […]