ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವೈಭವದ ಮೆರವಣಿಗೆ

ಉಡುಪಿ: ಕೃಷ್ಣ ಮಠದಲ್ಲಿ ಮಧ್ವನವಮಿಯ ಪ್ರಯುಕ್ತ ಪಲಿಮಾರು ಮಠದ ಹೃಷಿಕೇಶತೀರ್ಥರ ಸರ್ವಮೂಲ ಗ್ರಂಥದ ಮೂಲಪ್ರತಿಯನ್ನು ಸುವರ್ಣ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ನಡೆಯಿತು. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಹಿರಿಯ ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಮೆರವಣಿಗೆಯಲ್ಲಿ ಸಾನ್ನಿಧ್ಯ ವಹಿಸಿದ್ದರು.