ನಮ್ಮಲ್ಲಿ ಭಿನ್ನಮತ ಇಲ್ಲ: ಒಗ್ಗಟ್ಟಾಗಿ ಬಿಜೆಪಿ ರಥ ಎಳೆಯುತ್ತೇವೆ- ಸಂಸದೆ ಶೋಭಾ 

ಉಡುಪಿ:ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಟಿಕೆಟ್ ಗೆ ಆಕಾಂಕ್ಷೆ ಪಡೋದು ತಪ್ಪಲ್ಲ.‌ ಟಿಕೆಟ್ ಘೋಷಣೆಯಾದ ಬಳಿಕ ಅಭ್ಯರ್ಥಿ ಪರ ದುಡಿಯುತ್ತಾರೆ ಎಂದು ಸಂಸದೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಬಿಜೆಪಿ ವರಿಷ್ಠರು ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದಾರೆ. ಪಕ್ಷದ ರಾಷ್ಟ್ರೀಯ, ರಾಜ್ಯ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಅವಕಾಶ ನೀಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಾವು ಒಗ್ಗಟ್ಟಾಗಿ […]