ಕರಾವಳಿಯಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ:

ಕರಾವಳಿ: ಮುಂದಿನ ಮೂರು ದಿನಗಳಲ್ಲಿ ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಸಂಭವವಿದ್ದು, ಭಾರೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಈಗಾಗಲೇ ಮಳೆ ಕೊರತೆಯಿಂದ ಬಳಲುತ್ತಿರುವ ಕರಾವಳಿಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ಜನತೆ ಖಷ್ ಆಗಿದ್ದಾರೆ .ಇದೀಗ ಮುಂಗಾರು ಚುರುಕುಗೊಂಡಿದ್ದು ಪೂರ್ಣಪ್ರಮಾಣದಲ್ಲಿ ಆವರಿಸಿಕೊಳ್ಳಲಿದೆ ಎಂದು ಹವಾಮನ ಇಲಾಖೆ ತಿಳಿಸಿದೆ.