ಕೊನೆಗೂ ಆಯ್ತು ಜಿಲ್ಲಾ ಉಸ್ತುವಾರಿ ಸಚಿವರ ನೇಮಕ:ಯಾವ ಜಿಲ್ಲೆಗೆ ಯಾರು ಉಸ್ತುವಾರಿ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಇಬ್ಬರು ಪ್ರಮುಖ ಸಚಿವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿಲ್ಲ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಐದು ತಿಂಗಳ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಿದೆ. ಇಷ್ಟು ದಿನ ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್ 1ರಂದು ಧ್ವಜಾರೋಹಣ ಮಾಡಲು ಮಾತ್ರ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿತ್ತು. ಇದೀಗ ಪೂರ್ಣ ಪ್ರಮಾಣದಲ್ಲಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಆದರೆ […]

ಗಮನಿಸಿ: ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯಡಿ ಇದೆ ವಿವಿಧ ಹುದ್ದೆ: ಅರ್ಜಿ ಸಲ್ಲಿಸಿ

ಬೆಂಗಳೂರು: ಕರ್ನಾಟಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 16/8/2021 ಕೊನೆಯ ದಿನಾಂಕವಾಗಿದೆ. 32 ಪಶುವೈದ್ಯಕೀಯ ಪರೀಕ್ಷಕರ ಹಾಗೂ 83 ಪಶುವೈದ್ಯಕೀಯ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 20/8/2021 ಕೊನೆ ದಿನ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ-ಅರ್ಜಿ ಆಹ್ವಾನ

ಉಡುಪಿ : ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2 ರ ಬಡ್ಡಿದರದಲ್ಲಿ ವಾರ್ಷಿಕವಾಗಿ ಗರಿಷ್ಠ ರೂ.1.00 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ. 2019-20 ನೇ ಸಾಲಿನಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾಗಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ […]

ಉಡುಪಿ:ಮಹಿಳೆಯರ ಒಳಉಡುಪು ಕಳವು:ಕಳ್ಳನಿಗೆ ಬುದ್ದಿ ಹೇಳಿ ಕಳಿಸಿದ ಸಮಾಜ ಸೇವಕರು

ಉಡುಪಿ: ನಗರದ ಜನ ವಸತಿ ಪ್ರದೇಶ ಹಾಗೂ ಹೊರ ವಲಯದ ಸ್ಥಳಗಳಲ್ಲಿ ಮಹಿಳೆಯರ ಒಳ ಉಡುಪುಗಳು, ಒಣಗಿಸಿದ ಸ್ಥಳಗಳಿಂದ ನಡು ರಾತ್ರಿ, ತಡ ರಾತ್ರಿ ಕಾಣೆಯಾಗುತ್ತಿರುವ ಬಗ್ಗೆ ದೂರುಗಳು ಸಾರ್ವಜನಿಕ ವಲಯದಲ್ಲಿ ಬಹಳವಾಗಿ ಕೇಳಿಬಂದಿವೆ. ಮುಜುಗರದ ಕಾರಣದಿಂದ ಸಾರ್ವಜನಿಕರು ಯಾರೂ ಪೋಲಿಸ್ ಠಾಣೆಗೆ ದೂರುಗಳನ್ನು ನೀಡುತ್ತಿಲ್ಲವೆಂದು ಭಾವಿಸಲಾಗಿದೆ. ಶನಿವಾರದ ದಿನ ಉಡುಪಿ ನಗರದಲ್ಲಿ ಮಹಿಳೆಯರ ಒಳ ಉಡುಪು ಧರಿಸಿ, ನಗರದಲ್ಲಿ ತಿರುಗಾಡುತ್ತಿರುವ ಅಪರಿಚಿತ ಯುವಕನೊರ್ವನು ಕಂಡು ಬಂದಿದ್ದಾನೆ. ಮಾಹಿತಿ ತಿಳಿದ ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ […]

ಉಡುಪಿ :ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಲು ಬಾಕಿಯಿರುವವರಿಗೆ ವಿಶೇಷ ಕಾರ್ಯಕ್ರಮ

ಉಡುಪಿ : ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂಬ ಹಿನ್ನೆಲೆಯಲ್ಲಿ, ಇನ್ನೂ ಕೂಡಾ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಲು ಬಾಕಿ ಇರುವ ಮತದಾರರು ಅದರಲ್ಲೂ ಪ್ರಮುಖವಾಗಿ ಯುವ ಹಾಗೂ ವಿಕಲಚೇತನ ಮತದಾರರಿಗೆ ತಮ್ಮ ಹೆಸರನ್ನು ನೊಂದಾಯಿಸಲು ಅನುಕೂಲವಾಗುವಂತೆ ಫೆ 23 ಮತ್ತು 24 ಹಾಗೂ ಮಾರ್ಚ್ 2 ಮತ್ತು 3 ರಂದು ಜಿಲ್ಲೆಯಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ವಿಶೇಷ ಆಂದೋಲನಾ […]