ಬೆಂಗಳೂರು: ಕಲ್ಲಡ್ಕ ಡಾ. ಪ್ರಭಾಕರ್ ಭಟ್ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರ ವಿರುದ್ಧ ದಾಖಲಾಗಿದ್ದ ಅಪರಾಧ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪ್ರಕರಣ ರದ್ದುಗೊಳಿಸುವಂತೆ ಕೋರಿ ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. 2018ರ ಏಪ್ರಿಲ್ 6 ರಂದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗದ ಅನುಮತಿ […]