ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ 

ಮುಂಬೈ: ಹಲವು ವರ್ಷಗಳ ಕಾಲ ಟೀಂ ಇಂಡಿಯಾದಲ್ಲಿ ಆಡಿದ, ಟಿ-20 ಕ್ರಿಕೆಟ್‍ನಲ್ಲಿ 6 ಸಿಕ್ಸರ್ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದ ಎಡಗೈ ಸ್ಫೋಟಕ ಆಟಗಾರ 37ರ ಹರೆಯದ ಯುವರಾಜ್ ಸಿಂಗ್ ಎಲ್ಲ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. ಯುವರಾಜ್ ಸೋಮವಾರ ಮುಂಬಯಿ ನ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ನಿವೃತ್ತಿ ನಿರ್ಧಾರ ಪ್ರಕಟಿಸಿದರು.   2011ರ ವಿಶ್ವಕಪ್ ಸರಣಿ ಶ್ರೇಷ್ಠ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದ ಯುವರಾಜ್ ಸದ್ಯ ವಿಶ್ವಕಪ್ ನಡೆಯುತ್ತಿರುವ ಸಂದರ್ಭ ದಲ್ಲೇ ನಿವೃತ್ತಿ ಘೋಷಿಸಿದ್ದಾರೆ. 2019 ರ ಐಸಿಸಿ […]