ತೆಂಕನಿಡಿಯೂರು : ಮರಳಿ ಶಾಲೆಗೆ ಜಾಗೃತಿ ಅಭಿಯಾನಕ್ಕೆ ಚಾಲನೆ

ಉಡುಪಿ, ಆಗಸ್ಟ್ 1: ಮಕ್ಕಳಿಗೆ ಪರಿಪೂರ್ಣ ಹಾಗೂ ಪರಿಣಾಮಕಾರಿಯಾದ ಶಿಕ್ಷಣವನ್ನು ನೀಡುವ ಪ್ರಕ್ರಿಯೆಯಲ್ಲಿ ಉಂಟಾಗುವ ಅಡೆತಡೆಗಳನ್ನು ನಿವಾರಿಸಲು ಪ್ರತಿಯೊಬ್ಬರೂ ಕೂಡ ಪ್ರಯತ್ನಿಸಿ ಮಕ್ಕಳನ್ನು ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಜೋಡಿಸಬೇಕಾದ ಅಗತ್ಯತೆ ಇದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಶಿಕ್ಷಣ ಸಂಪನ್ಮೂಲ […]