ಟಿಬೆಟ್ ಧರ್ಮಗುರು ದಲಾಯಿಲಾಮ ಮಂಗಳೂರಿಗೆ ಆಗಮನ

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಗುರುವಾರ ಮಂಗಳೂರಿಗೆ ಆಗಮಿಸಿದರು. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ, ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ವಿಮಾನ ನಿಲ್ದಾಣದ ಹೊರಗಡೆ ಟಿಬೆಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು. ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ […]