ಉಡುಪಿ:ಎ.24 ರಂದು ಡಾ. ರಾಜ್‌ಕುಮಾರ್ ಜಯಂತಿ

ಉಡುಪಿ: ಉಡುಪಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವರನಟ, ಪದ್ಮಭೂಷಣ ಡಾ. ರಾಜ್‌ಕುಮಾರ್ ಅವರ ೯೧ ನೇ ಜಯಂತಿ ಕಾರ್ಯಕ್ರಮ ಏಪ್ರಿಲ್ ೨೪ ರಂದು ಬೆಳಗ್ಗೆ ೧೦ ಗಂಟೆಗೆ ನಡೆಯಲಿದೆ.ಉಡುಪಿ ಅಜ್ಜರಕಾಡು ವಾರ್ತಾ ಇಲಾಖೆ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡುವರು.