ಉತ್ತರೆಯ ಆರ್ಭಟಕ್ಕೆ ಉಡುಪಿ ಮುಳುಗಡೆ: ಅಪಾಯದ ಭೀತಿಯಲ್ಲಿ ಸಿಲುಕಿದ ಸಾವಿರಾರು ಕುಟುಂಬ

ಉಡುಪಿ: ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಡುಪಿಯ ತಗ್ಗುಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದೆ. ಸಾವಿರಾರು ಕುಟುಂಬಗಳು ಅಪಾಯದಲ್ಲಿ ಸಿಲುಕ್ಕಿದ್ದು, ಜಿಲ್ಲಾಡಳಿತ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಉತ್ತರೆ ಮಳೆಯ ರೌದ್ರಾವತರಕ್ಕೆ ಉಡುಪಿ ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ಪ್ರವಾಹ ಉಂಟಾಗಿದೆ. ನಿನ್ನೆ ಮಧ್ಯಾಹ್ನದಿಂದ ಹಿಡಿದು ರಾತ್ರಿ ಪೂರ್ತಿ ಧಾರಾಕಾರ ವರ್ಷಧಾರೆಯಾಗಿದೆ. ಇದರಿಂದ ನಗರದ ಮಧ್ಯದಲ್ಲಿ ಹರಿಯುವ ಇಂದ್ರಾಣಿ ಹೊಳೆ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೊಳೆ ಪಾತ್ರದ ನೂರಾರು ಮನೆಗಳಿಗೆ ನೀರು ನುಗ್ಗಿದೆ. ಬೈಲಕೆರೆ, ಮಠದ […]