ಮಂಗಳೂರು: ಉಳ್ಳಾಲ‌ ಸೇತುವೆಯಿಂದ ಹಾರಿ‌ ಆತ್ಮಹತ್ಯೆಗೆ ಯತ್ನ

ಮಂಗಳೂರು: ಮಂಗಳೂರಿನ ಉಳ್ಳಾಲ ಸೇತುವೆಯಿಂದ ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಗಿರೀಶ್, ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಸದ್ಯ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಗಿರೀಶ್ ಮಂಗಳೂರಿನ ಉರ್ವ ಸ್ಟೋರ್‌ನಲ್ಲಿ ಸೀಯಾಳ ವ್ಯಾಪಾರ ಮಾಡುತ್ತಿದ್ದು, ಅವರ ಪತ್ನಿ  ಕೋರ್ಟ್‌ನಲ್ಲಿ ಉದ್ಯೋಗಿಯಾಗಿದ್ದಾರೆ. ಗಿರೀಶ್ ಪತ್ನಿ ಮಗುವಿನೊಂದಿಗೆ ಉರ್ವ ಪಿಡಬ್ಲ್ಯುಡಿ ಕ್ವಾಟ್ರರ್ಸ್‌ನಲ್ಲಿ ವಾಸಿಸುತ್ತಿದ್ದರು. ಸಂಜೆ ನಗರದಿಂದ ಉಳ್ಳಾಲ ಕಡೆಗೆ ತೆರಳಿದ ಗಿರೀಶ್ ಸೇತುವೆಯಿಂದ ನೇತ್ರಾವತಿ ನದಿ […]