ಸಮಾನತೆಯ ಸಂವಿಧಾನದ ಒಳಗೆ ಮನುವಾದಿ ಸಿದ್ದಾಂತ ತುರುಕಿಸಲಾಗಿದೆ: ನಾರಾಯಣ ಮಣೂರು

ಉಡುಪಿ: ಸ್ವಾತಂತ್ರ್ಯ ದೊರೆತ ದಿನದಿಂದ ಆಳುವ ವ್ಯವಸ್ಥೆ ಮನುಧರ್ಮ ಶಾಸನ, ಮನುವಾದಿ ಸಿದ್ದಾಂತವನ್ನು ಅಂಬೇಡ್ಕರ್ ಜಾರಿಗೊಳಿಸಿದ ಸಮಾನತೆಯ ಸಂವಿಧಾನದ ಒಳಗೆ ತುರುಕಿಸಿ, ತನ್ನ ಅಧಿಕಾರವನ್ನು ವ್ಯವಸ್ಥಿತವಾಗಿ ಕಾಪಾಡಿಕೊಂಡು ಬಂದಿದೆ ಎಂದು ದಲಿತ ಚಿಂತಕ ನಾರಾಯಣ ಮಣೂರು ಹೇಳಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಮೂಡುಬೆಟ್ಟು ನಗರ ಶಾಖೆಯ ಆಶ್ರಯದಲ್ಲಿ ಮೂಡುಬೆಟ್ಟು ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ ದಲಿತ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು. ಈ ದೇಶವನ್ನು ನಾಶ ಮಾಡಲು ಇಲ್ಲಿನ ಶಿಕ್ಷಣ ವ್ಯವಸ್ಥೆಯ ತಳ ತಪ್ಪಿಸಿ […]
ಋಣ ಮುಕ್ತ ಕಾಯ್ದೆ- ಸಹಕಾರಿಗಳಿಗೆ ಅನ್ವಯಿಸುವುದಿಲ್ಲ: ಮಂಜುನಾಥ್

ಉಡುಪಿ: ರಾಜ್ಯ ಸರ್ಕಾರ ಘೋಷಿಸಿರುವ ‘ಕರ್ನಾಟಕ ಋಣ ಮುಕ್ತ ಕಾಯ್ದೆ-2018’ ಸೌಹಾರ್ದ ಸಹಕಾರಿಗಳಿಗೆ ಅನ್ವಯಿಸುವುದಿಲ್ಲ. ಈ ಕಾಯ್ದೆ ಕೇವಲ ಲೇವಾದೇವಿಗಾರರು ಮತ್ತು ಪಾನ್ ಬ್ರೋಕರ್‌ಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ನಿರ್ದೇಶಕ ಎಸ್.ಕೆ. ಮಂಜುನಾಥ್ ಹೇಳಿದ್ದಾರೆ. ಎಲ್ಲಾ ಸೌಹಾರ್ದ ಸಹಕಾರಿಗಳ ಸದಸ್ಯರುಗಳು ಪಡೆದಿರುವ ಎಲ್ಲಾ ರೀತಿಯ ಸಾಲಗಳನ್ನು ಕ್ಲಪ್ತ ಸಮಯಕ್ಕೆ ಪಾವತಿಸಿ ಸಹಕಾರಿ ರಂಗದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಧಿಕಾರ ವಿಕೇಂದ್ರೀಕರಣದಿಂದ ಸರಕಾರದ ಸೌಲಭ್ಯ ಗ್ರಾಮ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯ: ಜೆರಾಲ್ಡ್ ಐಸಾಕ್

ಉಡುಪಿ: ಅಧಿಕಾರ ವಿಕೇಂದ್ರೀಕರಣದ ಮೂಲಕ ಗ್ರಾ.ಪಂ. ಸದಸ್ಯರಿಗೆ ಅಧಿಕಾರ ಮತ್ತು ಸೇವೆ ನೀಡುವ ವಿಶೇಷ ವ್ಯವಸ್ಥೆ ಇರುವುದರಿಂದ ಸರ್ಕಾರದ ಸವಲತ್ತುಗಳನ್ನು ಗ್ರಾಮ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಶೋಕ ಮಾತಾ ಇಗರ್ಜಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕೆಥೊಲಿಕ್ ಜನಪ್ರತಿನಿಧಿಗಳ ಸಹಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ ಬಾರಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಜಿಲ್ಲೆಯ 112 ಕ್ರೈಸ್ತ ಜನಪ್ರತಿನಿಧಿಗಳು ಆಯ್ಕೆಯಾಗಿದ್ದು, […]
ದ.ಕ. ಜಿಲ್ಲೆಯಾದ್ಯಂತ ನೆರೆ: ನಿರಂತರ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ಮೇಲೆ ನಿರಂತರ ನಿಗಾ ವಹಿಸಿ ಸಾರ್ವಜನಿಕ ಜೀವ ಹಾನಿ ತಪ್ಪಿಸಲು ಪ್ರಯತ್ನಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆಯಲ್ಲಿ ಸೂಚನೆ ರವಾನಿಸಿದ್ದಾರೆ. ನದಿ ಪಾತ್ರದಲ್ಲಿ ವಾಸಿಸುತ್ತಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಕೆಲ ಪ್ರದೇಶಗಳಿಗೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಧಿಕಾರಿಗಳು ಅಲ್ಲಿಯೇ ಇದ್ದು, ಪರಿಸ್ಥಿತಿಯನ್ನು ಗಮನಿಸಬೇಕು. ಗಂಜಿ ಕೇಂದ್ರಗಳಲ್ಲಿ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಬೇಕು. ಉತ್ತಮ ಆಹಾರ, ಪುರುಷರಿಗೆ, ಮಹಿಳೆಯರಿಗೆ […]
ಆ. 16ಕ್ಕೆ ಎಂಜಿಎಂನಲ್ಲಿ ಪುನಶ್ಚೇತನ ಕಾರ್ಯಗಾರ
ಉಡುಪಿ: ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರ ವೇದಿಕೆ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಹಯೋಗದಲ್ಲಿ ಪುನಶ್ಚೇತನ ಕಾರ್ಯಾಗಾರ ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ಧ್ವನ್ಯಾಲೋಕದಲ್ಲಿ ಆಗಸ್ಟ್ 16ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಉಡುಪಿ ಪಿಪಿಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಜಗದೀಶ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸುವರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ನಿರ್ದೇಶಕ ಪ್ರೊ. ವರದೇಶ ಹಿರೇಗಂಗೆ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.