ಮಂಗಳೂರು: ಮನೆಗೆ ಬೆಂಕಿ ಅಪಾರ ಹಾನಿ

ಮಂಗಳೂರು: ಮಂಗಳೂರಿನ ಪಂಪ್ ವೆಲ್ ನಂತೂರು ಸಮೀಪದ ಮನೆಯೊಂದಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ. ಮಂಗಳವಾರ ರಾತ್ರಿ 12 ಗಂಟೆ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ. ನವೀನ್ ತಾರೆತೋಟ ಎಂಬವರ ಮನೆ ಇದಾಗಿದ್ದು, ಮನೆ ಸುಟ್ಟು ಅಪಾರ ಹಾನಿ ಸಂಭವಿಸಿದೆ. ಸುಮಾರು 4 ಲಕ್ಷ ರೂ. ನಷ್ಟ ಉಂಟಾಗಿದೆ. ಕದ್ರಿ ಅಗ್ನಿಶಾಮಕ ದಳದಿಂದ ಕಾರ್ಯಚರಣೆ ನಡೆದಿದೆ.

ದ.ಕ. ಜಿಲ್ಲೆಯಲ್ಲಿ ದಲಿತ ವಿದ್ಯಾರ್ಥಿಗಳ ಸರಣಿ  ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಉಡುಪಿ: ಇತ್ತೀಚೆಗೆ‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ದಲಿತ ವಿದ್ಯಾರ್ಥಿಗಳ ಸರಣಿ ಅತ್ಯಾಚಾರ ಖಂಡಿಸಿ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಸಿಓಡಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಉಡುಪಿ ಅಂಬೇಡ್ಕರ್‌ ಯುವಸೇನೆ ವತಿಯಿಂದ ಅಜ್ಜರಕಾಡಿನ ಸೈನಿಕರ ಹುತಾತ್ಮ ಸ್ಮಾರಕದ ಎದುರು ಬುಧವಾರ ಪ್ರತಿಭಟನೆ ನಡೆಯಿತು. ದಲಿತ ಮುಖಂಡ ಜಯನ್‌ ಮಲ್ಪೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಬುದ್ಧಿವಂತರ ಜಿಲ್ಲೆಯೆಂದು ಕರೆಯಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದೆ. ಒಂದೇ ತಿಂಗಳಲ್ಲಿ ಮೂರು ದಲಿತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ […]

ಕಲುಷಿತ ಐಸ್‍ಕ್ಯಾಂಡಿ ಪ್ರಕರಣ, ಕ್ರಮ ಕೈಗೊಳ್ಳಿ: ಹೆಪ್ಸಿಬಾ ರಾಣಿ ಕೊರ್ಲಪಾಟಿ

ಉಡುಪಿ, ಜುಲೈ 9: ಇತ್ತೀಚೆಗೆ ಜಿಲ್ಲೆಯಲ್ಲಿ ಕಲುಷಿತ ಐಸ್‍ಕ್ಯಾಂಡಿ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಸಂಬಂದಪಟ್ಟವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ ತಯಾರಿಸಿದ ಐಸ್‍ಕ್ಯಾಂಡಿ ಸೇವಿಸಿ ಸುಮಾರು 78 ಮಕ್ಕಳು ಅಸ್ವಸ್ಥಗೊಂಡಿದ್ದು, ಈ ಕುರಿತಂತೆ ಐಸ್‍ಕ್ಯಾಂಡಿ ತಯಾರಿಕರ […]

ತಂಬಾಕು ಕಂಪೆನಿಗಳೊಂದಿಗೆ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಬೇಡಿ: ಜಿಲ್ಲಾಧಿಕಾರಿ

ಉಡುಪಿ, ಜುಲೈ 9: ಸರಕಾರಿ ಇಲಾಖೆಗಳು, ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಸಮಾರಂಭದ ಆಯೋಜನೆ, ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು, ಅವರು ನೀಡುವ ಅನುದಾನ, ಪರಿಕರಗಳುಗಳನ್ನು ಯಾವುದೇ ಇಲಾಖೆಗಳು ಪಡೆಯಬಾರದು, ಇದು ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮದ ಉಲ್ಲಂಘನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಉಡುಪಿ ಜಿಲ್ಲೆ ಇದರ ತ್ರೈಮಾಸಿಕ […]

ಉಡುಪಿ: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ; ಕುಟುಂಬ ‌ಸಮ್ಮಿಲನ‌

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮ ಶನಿವಾರ ನಗರದ ಪುರಭವನದಲ್ಲಿ ನಡೆಯಿತು. ಕಾರ್ಯಕ್ರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಿಂಡಿಕೇಟ್ ಬ್ಯಾಂಕ್ ಮಣಿಪಾಲದ ವಲಯ ಕಚೇರಿಯ ಪ್ರಧಾನ ವ್ಯವಸ್ಥಾಪಕ ಭಾಸ್ಕರ್ ಹಂದೆ ಮಾತನಾಡಿ, ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಸದಾ ಎಚ್ಚರಿಕೆಯಿಂದ ಮಾಡಿಕೊಂಡು ಬರುತ್ತಿದ್ದಾರೆ. ಇತ್ತೀಚೆಗೆ ಮಾದಕ ದ್ರವ್ಯ ಸೇವನೆ ವಿರುದ್ದ ಕೂಡ ದನಿ ಎತ್ತಿ […]