ಜಿಲ್ಲೆಯಲ್ಲಿ ಟ್ರಾನ್ಸ್ ಜೆಂಡರ್ಸ್‍ ನೊಂದಣಿ ಅಭಿಯಾನ: ಜಿಲ್ಲಾಧಿಕಾರಿ

ಉಡುಪಿ, ಜುಲೈ 6: ಉಡುಪಿ ಜಿಲ್ಲೆಯಲ್ಲಿರುವ ಟ್ರಾನ್ಸ್ ಜೆಂಡರ್ಸ್‍ಗಳಿಗೆ ಸರಕಾರದ ವಿವಿಧ ಸೌಲಭ್ಯ ನೀಡುವ ನಿಟ್ಟಿನಲ್ಲಿ ಅವರ ನಿಖರ ಸಂಖ್ಯೆ ಇಲ್ಲದ ಕಾರಣ, ಜಿಲ್ಲೆಯಲ್ಲಿನ ಟ್ರಾನ್ಸ್ ಜೆಂಡರ್ಸ್‍ಗಳನ್ನು ನೊಂದಣಿ ಮಾಡಿ, ಅವರಿಗೆ ಗುರುತಿನ ಚೀಟಿ ವಿತರಿಸಲು ವಿಶೇಷ ನೊಂದಣಿ ಅಭಿಯಾನ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಶನಿವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಟ್ರಾನ್ಸ್ ಜೆಂಡರ್ಸ್ ಸಮನ್ವಯ ಸಮಿತಿ/ಕೋಶ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ 282 ಮಂದಿ […]

ಗೋಹತ್ಯೆ ನಿಷೇಧ ಜಾರಿಗೆ ಪೇಜಾವರ ಶ್ರೀಗಳ ಆಗ್ರಹ

ಮಂಗಳೂರು: ಶುಕ್ರವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ ಗೋಹತ್ಯೆ ನಿಷೇಧ ಜಾರಿ ಮಾಡಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಆಗ್ರಹಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ದೇಶದಲ್ಲಿ‌ ಗೋಹತ್ಯೆ ನಿಷೇಧ ಅಗತ್ಯ ವಾಗಿದೆ ಎಂದರು. ಜತೆಗೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮೋದಿಯವರು ಕಾರ್ಯಕ್ರಮ ತರಬೇಕು. ಹಾಗೆಯೇ ಕೃಷಿ ಮತ್ತು ವೈದ್ಯಕೀಯಕ್ಕೆ ಬಜೆಟ್ ನಲ್ಲಿ ಹೆಚ್ಚು ಒತ್ತು ನೀಡಬೇಕೆಂದು ಶ್ರೀಗಳಿ ಮನವಿ ಮಾಡಿದರು.

ಕುಶಲಕರ್ಮಿಗಳಿಗೆ ಉಚಿತ ಉಪಕರಣ: ಅರ್ಜಿ ಆಹ್ವಾನ

ಉಡುಪಿ, ಜುಲೈ 4: ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ/ ವೃತ್ತಿಪರ ಯೋಜನೆ/ ಗಿರಿಜನ ಉಪಯೋಜನೆಯಡಿ ವಿವಿಧ ಕಸುಬುಗಳಾದ ಗಾರೆ ಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರೀಷಿಯನ್ ಹಾಗೂ ಟೈಲರಿಂಗ್ ವೃತ್ತಿಯ ಉಪಕರಣಗಳನ್ನು ಉಚಿತವಾಗಿ ನೀಡಲಾಗುವುದು. ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಜಿದಾರರು ಅರ್ಜಿ ನಮೂನೆಯನ್ನು ಆಯಾ ಗ್ರಾಮ ಪಂಚಾಯತ್‍ಗಳಲ್ಲಿ ಪಡೆದು, ಆಗಸ್ಟ್ 20 ರ ಒಳಗೆ ಉಪನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, ರಜತಾದ್ರಿ, ಮಣಿಪಾಲ ಈ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್, […]

ಉದ್ಯಾವರ: ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಪಲ್ಟಿ

ಉಡುಪಿ: ಮಂಗಳೂರಿನಿಂದ ಕಾರವಾರ ಕಡೆಗೆ ತೆರಳುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ರಸ್ತೆಬದಿ ಮಗುಚಿ ಬಿದ್ದ ಘಟನೆ ಬುಧವಾರ ಬೆಳಗ್ಗೆ 5:45 ರ ವೇಳೆಗೆ ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಟ್ಯಾಂಕರ್ ಚಾಲಕ ಉದ್ಯಾವರದಲ್ಲಿ ಟ್ಯಾಂಕರಿಗೆ ಡಿಸೇಲ್ ತುಂಬಿಸಿಕೊಂಡು ಮುಂದೆ ಸಾಗಿದ್ದು, ಸ್ವಲ್ಪ ದೂರ ತೆರಳುವಾಗ ಪೆಟ್ರೋಲ್ ಬಂಕ್ ನಲ್ಲಿ ಸ್ವೈಪ್ ಮಾಡಿರುವ ಎಟಿಎಂ ಕಾರ್ಡ್ ಅಲ್ಲೇ ಬಿಟ್ಟಿರುವುದು ಚಾಲಕನ ನೆನಪಿಗೆ ಬಂದಿದೆ. ಹೀಗಾಗಿ ಆತ ಬಲಾಯಿಪಾದೆಯ ಯುಟರ್ನ್ ನಲ್ಲಿ ಟ್ಯಾಂಕರನ್ನು ತಿರುಗಿಸಲು ಪ್ರಯತ್ನಿಸಿದ್ದು […]

ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ, ಜುಲೈ 10 ರೊಳಗೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ

ಉಡುಪಿ, ಜುಲೈ 2: ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಕೆ.ಎಂ.ಎಫ್ ಡೈರಿ ಕ್ರಾಸ್ ವರೆಗಿನ ರಸ್ತೆಯಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ ರೂಪಿಸಲು ನಿರ್ಧರಿಸಿದ್ದು, ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ, ನಗರಸಭೆ, ಮೆಸ್ಕಾಂ ಸೇರಿದಂತೆ ಎಲ್ಲಾ ಇಲಾಖೆಗಳು ತಮ್ಮ ಅಗತ್ಯತೆಗಳ ಕುರಿತು ಜುಲೈ 10 ರ ಒಳಗೆ ಜಿಲ್ಲಾ ನಗರಾಭಿವೃದ್ದಿ ಕೋಶಕ್ಕೆ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಸ್ಥಿರ ಸಂಚಾರ […]