ಮಣಿಪಾಲ: ರಾಜಾಪುರ ಸಾರಸ್ವತ ಮಹಿಳೆಯರಿಂದ ‘ಯವಾ ನೇಜಿ ಲಾವ್ಯ’

ಉಡುಪಿ: ಮಣಿಪಾಲದ ರಾಜಾಪುರ ಸಾರಸ್ವತ ಮಹಿಳಾ ವೇದಿಕೆಯ ವತಿಯಿಂದ ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ಯವಾ ನೇಜಿ ಲಾವ್ಯ (ಬನ್ನಿ ನೇಜಿ ನಡೋಣ) ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೇದಿಕೆಯ ಅಧ್ಯಕ್ಷೆ ಮೋಹಿನಿ ಎನ್.ನಾಯಕ್ ಅವರ ನೇತೃತ್ವದಲ್ಲಿ ವೇದಿಕೆಯ ಸದಸ್ಯರೆಲ್ಲರೂ ಸೇರಿ ಸುರಿಯುವ ಮಳೆಯಲ್ಲಿಯೇ ಪಾಡ್ದನ ಹಾಡಿ, ಗದ್ದೆಯಲ್ಲಿ ನೇಜಿ (ಬತ್ತದ ಸಸಿ)ಗಳನ್ನು ನೆಟ್ಟು ತಮ್ಮ ಹಿರಿಯರ ಶ್ರಮ ಸಂಸ್ಕೃತಿಯನ್ನು ಗೌರವಿಸಿದರು. ಇದೇ ಸಂದರ್ಭದಲ್ಲಿ ಗದ್ದೆಯಲ್ಲಿ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಮಧ್ಯಾಹ್ನ ಕಲಾಯಿಗುತ್ತಿನ ಮನೆಯವರಿಂದ ಗ್ರಾಮೀಣ […]
ಗಾಂಜ ಹೊಂದಿದ್ದ ಓರ್ವನ ಬಂಧನ; 1 ಕೆ.ಜಿ. ಗಾಂಜ ವಶ

ಬಂಟ್ವಾಳ: ಗಾಂಜಾ ಹೊಂದಿದ್ದ ಓರ್ವ ವ್ಯಕ್ತಿಯನ್ನು ಶನಿವಾರ ಬಂಟ್ವಾಳದಲ್ಲಿ ಬಂಧಿಸಲಾಗಿದೆ.. ಅಮೀರ್ ಹುಸೈನ್ (45) ಬಂಧಿತ ಆರೋಪಿ. ಈತನನ್ನು ಬಂಟ್ವಾಳದ ತುಂಬೆ ಎಂಬಲ್ಲಿ ಬಂಧಿಸಲಾಗಿದ್ದು, 39,000 ಮೌಲ್ಯದ 1 ಕೆಜಿ 330 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈತ ಮಂಗಳೂರಿನ ಮೂಡುಶೆಡ್ಡೆಯ ಓರ್ವ ವ್ಯಕ್ತಿಯಿಂದ ಗಾಂಜಾ ಪಡೆದಿದ್ದ ಎಂದು ತಿಳಿದು ಬಂದಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ 8ನೇ ಪರಿಸರ ಸ್ನೇಹಿ ಅಭಿಯಾನ

ಉಡುಪಿ: ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ 8ನೇ ವಾರದ ಪರಿಸರ ಸ್ನೇಹಿ ಅಭಿಯಾನವು ಶನಿವಾರ ಸಂಜೆ ಅಜ್ಜರಕಾಡು ಉದ್ಯಾನವನದಲ್ಲಿ ನಡೆಯಿತು. ವೆಸ್ಟ್ ಇಂಡೀಸ್‌ನಲ್ಲಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾಗಿರುವ ಡಾ. ಶಿವಾನಂದ ನಾಯಕ್ ಅವರು ಚಾಲನೆ ನೀಡಿ ಮಾತನಾಡಿ, ಪರಿಸರವನ್ನು ಸಂರಕ್ಷಿಸಲು ಪ್ರತಿಯೊಬ್ಬರೂ ಕ್ರಿಯಾಶೀಲ ಪ್ರಯತ್ನವನ್ನು ಮಾಡಿದರೆ ಜಾಗತಿಕ ತಾಪಮಾನ ಏರಿಕೆ ಪ್ರಕ್ರಿಯೆಗೆ ಕಡಿವಾಣ ಹಾಕಬಹುದು. ಗಿಡಗಳನ್ನು ನೆಡುವ ಬಗ್ಗೆ ಮಾತ್ರ ಗಮನಹರಿಸದೇ, ಅದನ್ನು ಪೋಷಿಸಿ ಹೆಮ್ಮರವಾಗಿ ಬೆಳೆಯಲು ಪೂರಕ ವಾತಾವರಣ ಸೃಷ್ಟಿಸಬೇಕು ಎಂದರು. ನಗರಸಭಾ ಸದಸ್ಯೆ ರಶ್ಮಿ […]
ಮಾದಕ ದ್ರವ್ಯ ವ್ಯಸನ ಸಮಾಜಕ್ಕೆ ಕಳಂಕ: ಹೆಪ್ಸಿಬಾ ರಾಣಿ

ಉಡುಪಿ: ಮಾದಕ ದ್ರವ್ಯ ವ್ಯಸನ ಸಮಾಜಕ್ಕೆ ಅಂಟಿಕೊಂಡಿರುವ ಕಳಂಕ. ಈ ಕಾನೂನು ವಿರೋಧಿ ಚಟುವಟಿಕೆಗಳ ವಿರುದ್ಧ ಜಾಗೃತ ಸಮಾಜ ಧ್ವನಿ ಎತ್ತಬೇಕು. ನಮ್ಮ ಮುಂದಿನ ಪೀಳಿಗೆ ದುಶ್ಚಟಗಳಿಗೆ ಬಲಿಯಾಗದಂತೆ ತಡೆಯಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದರು. ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಶನಿವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಮಾದಕ ವ್ಯಸನ ವಿರೋಽಧಿ ಮಾಸಾಚರಣೆ ಮತ್ತು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಂತೆ ಮಾಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ. […]
ಡ್ರಗ್ಸ್ ಜಾಲ ಬೇಧಿಸಿದ ಪೊಲೀಸರು: ನಾಲ್ವರ ಬಂಧನ

ಮಂಗಳೂರು: ಡ್ರಗ್ಸ್ ಜಾಲವನ್ನು ಭೇದಿಸಿದ ಮಂಗಳೂರು ನಗರ ಪೊಲೀಸರು ನಾಲ್ವರು ಯುವಕರನ್ನು ಶನಿವಾರ ಬಂಧಿಸಿದ್ದಾರೆ. ಪೃಥ್ವಿ ಪಿ. ಕುಮಾರ್, ಕ್ಲೆವಿನ್ ಸಲ್ಡಾನಾ, ವಿ.ಎಸ್. ನಿಖಿಲ್ ಹಾಗೂ ಸಾಗರ್ ಅಮೀನ್, ಬಂಧಿತ ಆರೋಪಿಗಳು. ಆರೋಪಿಗಳಿಂದ 1 ಕೆ.ಜಿ. 200 ಗ್ರಾಂ ಗಾಂಜಾ ಹಾಗೂ ಐದು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಹಾವಳಿ ವಿರುದ್ಧ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಎಸಿಪಿ ಸೆಂಟ್ರಲ್ ಮತ್ತು ತಂಡ ಈ ಮಹತ್ವದ ಕಾರ್ಯಾಚರಣೆ ನಡೆಸಿದೆ. ಅತ್ತಾವರ ಬಾಬುಗುಡ್ಡೆ ಒಂದನೇ ಕ್ರಾಸ್ ರಸ್ತೆಯಲ್ಲಿ […]