ಕುಶಲಕರ್ಮಿಗಳಿಗೆ ಉಚಿತ ಉಪಕರಣ: ಅರ್ಜಿ ಆಹ್ವಾನ
ಉಡುಪಿ, ಜುಲೈ 4: ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕುಶಲಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ/ ವೃತ್ತಿಪರ ಯೋಜನೆ/ ಗಿರಿಜನ ಉಪಯೋಜನೆಯಡಿ ವಿವಿಧ ಕಸುಬುಗಳಾದ ಗಾರೆ ಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರೀಷಿಯನ್ ಹಾಗೂ ಟೈಲರಿಂಗ್ ವೃತ್ತಿಯ ಉಪಕರಣಗಳನ್ನು ಉಚಿತವಾಗಿ ನೀಡಲಾಗುವುದು. ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಜಿದಾರರು ಅರ್ಜಿ ನಮೂನೆಯನ್ನು ಆಯಾ ಗ್ರಾಮ ಪಂಚಾಯತ್‍ಗಳಲ್ಲಿ ಪಡೆದು, ಆಗಸ್ಟ್ 20 ರ ಒಳಗೆ ಉಪನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, ರಜತಾದ್ರಿ, ಮಣಿಪಾಲ ಈ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್, […]
ಉದ್ಯಾವರ: ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಪಲ್ಟಿ

ಉಡುಪಿ: ಮಂಗಳೂರಿನಿಂದ ಕಾರವಾರ ಕಡೆಗೆ ತೆರಳುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ರಸ್ತೆಬದಿ ಮಗುಚಿ ಬಿದ್ದ ಘಟನೆ ಬುಧವಾರ ಬೆಳಗ್ಗೆ 5:45 ರ ವೇಳೆಗೆ ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಟ್ಯಾಂಕರ್ ಚಾಲಕ ಉದ್ಯಾವರದಲ್ಲಿ ಟ್ಯಾಂಕರಿಗೆ ಡಿಸೇಲ್ ತುಂಬಿಸಿಕೊಂಡು ಮುಂದೆ ಸಾಗಿದ್ದು, ಸ್ವಲ್ಪ ದೂರ ತೆರಳುವಾಗ ಪೆಟ್ರೋಲ್ ಬಂಕ್ ನಲ್ಲಿ ಸ್ವೈಪ್ ಮಾಡಿರುವ ಎಟಿಎಂ ಕಾರ್ಡ್ ಅಲ್ಲೇ ಬಿಟ್ಟಿರುವುದು ಚಾಲಕನ ನೆನಪಿಗೆ ಬಂದಿದೆ. ಹೀಗಾಗಿ ಆತ ಬಲಾಯಿಪಾದೆಯ ಯುಟರ್ನ್ ನಲ್ಲಿ ಟ್ಯಾಂಕರನ್ನು ತಿರುಗಿಸಲು ಪ್ರಯತ್ನಿಸಿದ್ದು […]
ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ, ಜುಲೈ 10 ರೊಳಗೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ

ಉಡುಪಿ, ಜುಲೈ 2: ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಕೆ.ಎಂ.ಎಫ್ ಡೈರಿ ಕ್ರಾಸ್ ವರೆಗಿನ ರಸ್ತೆಯಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ ರೂಪಿಸಲು ನಿರ್ಧರಿಸಿದ್ದು, ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ, ನಗರಸಭೆ, ಮೆಸ್ಕಾಂ ಸೇರಿದಂತೆ ಎಲ್ಲಾ ಇಲಾಖೆಗಳು ತಮ್ಮ ಅಗತ್ಯತೆಗಳ ಕುರಿತು ಜುಲೈ 10 ರ ಒಳಗೆ ಜಿಲ್ಲಾ ನಗರಾಭಿವೃದ್ದಿ ಕೋಶಕ್ಕೆ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಸ್ಥಿರ ಸಂಚಾರ […]
ಮೂಡಬಿದಿರೆ: ಜನರ ಸಮಸ್ಯೆಗೆ ಸ್ಪಂಧಿಸದ ಅಧಿಕಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ತರಾಟೆ

ಮೂಡಬಿದಿರೆ: ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ನೀಡದ ಮೂಡಬಿದಿರೆ ನಾಡಕಚೇರಿಯ ಅಧಿಕಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಶಾಸಕರು ಏಕಾಏಕಿ ಮೂಡಾ ಕಚೇರಿಗೆ ತೆರಳಿದ್ದಾರೆ. ಈ ವೇಳೆ ಜನರು ಸರತಿ ಸಾಲಿನಲ್ಲಿ ನಿಂತದ್ದನ್ನು ಕಂಡ ಶಾಸಕರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತನ್ನ ರೌದ್ರಾವತಾರ ತೋರಿದ್ದಾರೆ. ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿ. ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತರೂ ಅವರ ಸಮಸ್ಯೆ ಕೇಳುವವರಿಲ್ಲ. […]
ಹಿರಿಯಡಕ: ಉಚಿತ ದಂತ ಚಿಕಿತ್ಸಾ ಶಿಬಿರ

ಉಡುಪಿ, ಜುಲೈ 1: ಲಯನ್ಸ್ ಕ್ಲಬ್ ಹಾಗೂ ಮಣಿಪಾಲದ ಕೆ.ಎಂ.ಸಿ. ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರವು ಇತ್ತೀಚೆಗೆ ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಸೆಕೆಂಡ್ ವೈಸ್ ಲಯನ್ ಡಿಸ್ಟ್ರಿಕ್ಟ್ ಗವರ್ನರ್ ವಿಶ್ವನಾಥ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಉಚಿತ ದಂತ ಚಿಕಿತ್ಸಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಹಿರಿಯಡಕ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನದಾಸ್ ಆಚಾರ್ಯ ಮಾತನಾಡಿ, ಲಯನ್ ಕ್ಲಬ್ ಒಂದು ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಸೇವೆ, ಸ್ನೇಹ, ನಾಯಕತ್ವ ಅದರ ಮೂಲತತ್ತ್ವಗಳಾಗಿವೆ […]