ನಿಫಾ ವೈರಸ್ ಭಯ ಬೇಡ, ಎಚ್ಚರವಿರಲಿ: ಡಾ.ವಾಸುದೇವ

ಉಡುಪಿ, ಜೂನ್ 11: ನಿಫಾ ವೈರಸ್ ಕುರಿತಂತೆ ಜಿಲ್ಲೆಯ ಜನತೆ ಯಾವುದೇ ರೀತಿ ಆತಂಕ ಪಡುವ ಅಗತ್ಯ ಇಲ್ಲ. ಜ್ವರ ಅಥವಾ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದು ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಅವರು ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿಯ ಅಂತರ್ ಇಲಾಖಾ ಸಮನ್ವಯ ಸಮಿತಿ […]

ಮಂಗಳೂರು: ವಿಜಯೋತ್ಸವ ವೇಳೆ ಪೊಲೀಸರು ಕಾರ್ಯಕರ್ತರ ಮಧ್ಯೆ ವಾಗ್ವಾದ

ಮಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ವಿಜಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಚುನಾವಣಾ ಕಚೇರಿ ಮುಂಭಾಗ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು‌. ವಾಹನವೊಂದರಲ್ಲಿ‌ ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಈ ವೇಳೆ ಪೊಲೀಸರು ಅಡ್ಡಿಪಡಿಸಿದ್ದು, ವಾಗ್ವಾದಕ್ಕೆ ಕಾರಣ ವಾಯಿತು. ಹಿಂದೂಗಳಿಗೆ ಮಾತ್ರ ರಸ್ತೆಯಲ್ಲಿ ಉದ್ಘೋಷ ಕೂಗಲು ನೀವು ಬಿಡಲ್ಲ, ಪಂಪ್ ವೆಲ್ ಮುಂತಾದೆಡೆ ಇತರ ಸಮುದಾಯ ಗಂಟೆಗಳ ಕಾಲ ಸಂಚಾರಕ್ಕೆ ಅಡಚಣೆ ಮಾಡಿದರೂ […]