ಆ. 16ಕ್ಕೆ ಎಂಜಿಎಂನಲ್ಲಿ ಪುನಶ್ಚೇತನ ಕಾರ್ಯಗಾರ

ಉಡುಪಿ: ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರ ವೇದಿಕೆ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಹಯೋಗದಲ್ಲಿ ಪುನಶ್ಚೇತನ ಕಾರ್ಯಾಗಾರ ಉಡುಪಿ ಎಂಜಿಎಂ‌ ಕಾಲೇಜಿನ ಆವರಣದಲ್ಲಿರುವ ಧ್ವನ್ಯಾಲೋಕದಲ್ಲಿ ಆಗಸ್ಟ್  16ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಉಡುಪಿ ಪಿಪಿಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಜಗದೀಶ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸುವರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ನಿರ್ದೇಶಕ ಪ್ರೊ. ವರದೇಶ ಹಿರೇಗಂಗೆ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.

ಸಾಮಾಜಿಕ ಸುರಕ್ಷಾ ಕಲ್ಯಾಣ ಮಸೂದೆ ವಿರೋಧಿಸಿ ಪ್ರತಿಭಟನೆ 

ಉಡುಪಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಾಮಾಜಿಕ ಸುರಕ್ಷಾ ಕಲ್ಯಾಣ ಮಸೂದೆ–2018 ಅನ್ನು ಕೈಬಿಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕರು ಹೋರಾಟದ ಮೂಲಕ ಗಳಿಸಿದ 44 ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತಂದು, ಮಾಲೀಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಹೀಗೆ ತಿದ್ದುಪಡಿ ಮಾಡಲು ಹೊರಟಿರುವ ಕಾನೂನುಗಳಲ್ಲಿ ಕೋಟ್ಯಾಂತರ ಕಟ್ಟಡ ಕಾರ್ಮಿಕರು ನೋಂದಣಿಯಾಗಿರುವ ಮತ್ತು ಸೌಲಭ್ಯ […]

ಚುನಾವಾಣ ಕರ್ತವ್ಯ ನಿರತ ಸಿಬ್ಬಂದಿ ನಿಧನ-15 ಲಕ್ಷ ರೂ ಪರಿಹಾರ

ಉಡುಪಿ, ಅಗಸ್ಟ್ 5: ಜಿಲ್ಲೆಯಲ್ಲಿ 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ , ಮತಯಂತ್ರಗಳನ್ನು ಇಡಲಾದ ಭದ್ರತಾ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಯ ಸಿಬ್ಬಂದಿಗಳ ತುರ್ತು ಚಿಕಿತ್ಸೆಗಾಗಿ ಕರ್ತವ್ಯ ನಿರ್ವಹಿಸಲು ನಿಯೋಜಿಸಿದ್ದ ಆರೋಗ್ಯ ಇಲಾಖೆಯ ಅಂಬುಲೆನ್ಸ್ ನ ವಾಹನ ಚಾಲಕ ಕೆ.ದಿನೇಶ್ ಗಾಣಿಗ ಇವರು, ಮೇ 2 ರಂದು ಕರ್ತವ್ಯ ಮುಗಿಸಿ, ಮನೆಗೆ ಹಿಂದಿರುಗುವಾಗ ಬಾರ್ಕೂರು ಸರ್ಕಾರಿ ಆಸ್ಪತ್ರೆ ಬಳಿ , ಬಸ್ಸಿನಲ್ಲಿ ಹೃದಯಾಘಾತವಾಗಿ ಮೃತಪಟ್ಟಿರುತ್ತಾರೆ. ಮೃತರ ಕುಟುಂಬಕ್ಕೆ ಚುನಾವಣಾ ಆಯೋಗವು ರೂ.15 […]

ಸಮಾಜ ಸೇವೆಗೆ ಸಹಾಯ ಮಾಡುವ ಮನಸ್ಸಿದ್ದರೆ ಸಾಕು: ವಿಶು ಶೆಟ್ಟಿ 

ಉಡುಪಿ: ನಿಸ್ವಾರ್ಥ ಸೇವೆ ಮಾಡಿದರೆ ನಮಗೆ ಹೇಗಾದರೂ ಪ್ರತಿಫಲ ಸಿಗುತ್ತದೆ. ಸಮಾಜ ಸೇವೆಗೆ ಸಮಾಜ ಸೇವಕನೇ ಆಗಬೇಕಾಗಿಲ್ಲ. ಸಹಾಯ ಮಾಡುವ ಮನಸ್ಸಿದ್ದರೆ ಸಾಕು. ಕಷ್ಟಕ್ಕೆ ಮಿಡಿಯುವ ಹೃದಯವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕು ಎಂದು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ಹೇಳಿದರು. ಬಿಯಿಂಗ್‌ ಸೋಶಿಯಲ್‌ ವತಿಯಿಂದ ಶ್ರೀ ತ್ರಿಕಣ್ಣೇಶ್ವರೀವಾಣಿ ಕನ್ನಡ ಮಾಸ ಪತ್ರಿಕೆಯ ಸಹಭಾಗಿತ್ವದಲ್ಲಿ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಶನಿವಾರ ಆಯೋಜಿಸಿದ ಕೂತು ಮಾತನಾಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೋವಲ್ಲಿರುವವರ ಕಣ್ಣೀರು ಒರೆಸುವುದೇ ನನ್ನ ಸುಖ […]

ವಿಕಲಚೇತನರಿಗೆ ಆಧಾರ ಗೂಡಂಗಡಿ ಸೌಲಭ್ಯ

ಉಡುಪಿ, ಆಗಸ್ಟ್ 1: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಜಿಲ್ಲೆಯಲ್ಲಿ, 2019-20 ನೇ ಸಾಲಿನಲ್ಲಿ ವಿಕಲಚೇತನರಿಗೆ ಸ್ವ ಉದ್ಯೋಗ ಕೈಗೊಳ್ಳಲು ಆಧಾರ ಯೋಜನೆಯಡಿ ಪರಿಷ್ಕತ ನಿಯಮಗಳಡಿಯಲ್ಲಿ ಶೇ. 50 ಬ್ಯಾಂಕಿನಿಂದ ಸಾಲ ಮತ್ತು ಶೇ. 50 ಸಬ್ಸಿಡಿ ಇಲಾಖೆಯಿಂದ ನೀಡಲಾಗುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರು ಕೂಡಾ ಹೊಸದಾಗಿ ಈ ಸಾಲಿನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಅಗಸ್ಟ್ 10 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ, ಮಾರ್ಗಸೂಚಿ ಮತ್ತು ಮಾಹಿತಿಗಾಗಿ […]