ಮಂಗಳೂರಿನ ಮೊದಲ ಬೋ ಸ್ಟ್ರಿಂಗ್ ಸೇತುವೆ ಕಾಮಗಾರಿ ಸೆಪ್ಟೆಂಬರ್‌ ನಲ್ಲಿ ಪೂರ್ಣ: ಬೆಂಗ್ರೆ- ತಣ್ಣೀರುಬಾವಿ ಜನಗಳ ಬಹುದಿನಗಳ ಕನಸು, ನನಸು

ಮಂಗಳೂರು: ಫಲ್ಗುಣಿ ನದಿಗೆ (ಗುರುಪುರ ನದಿ) ಅಡ್ಡಲಾಗಿ ಸುಲ್ತಾನ್ ಬತ್ತೇರಿ ಮತ್ತು ತಣ್ಣೀರುಬಾವಿಯನ್ನು ಸಂಪರ್ಕಿಸುವ ಅತ್ಯಾಧುನಿಕ ತಂತ್ರಜ್ಞಾನದ ಬೋ ಸ್ಟ್ರಿಂಗ್ ಸೇತುವೆಯ ಕಾಮಗಾರಿ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶುಕ್ರವಾರ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಯೋಜನೆಯು ಅತ್ಯಂತ ವೇಗವಾಗಿ ಪ್ರಗತಿಯಲ್ಲಿದ್ದು, ಸ್ಥಳೀಯ ನಿವಾಸಿಗಳಿಗೆ ನಗರದ ಸಂಪರ್ಕವನ್ನು ಇದು ಸುಲಭಗೊಳಿಸಲಿದೆ” ಎಂದರು. “ಸ್ಮಾರ್ಟ್ ಸಿಟಿ ಯೋಜನೆಯಡಿ […]