ಸ್ಟೂಡೆಂಟ್ ಪೊಲೀಸ್ ಕೆಡೆಟ್ ಮೂಲಕ ಮಕ್ಕಳಲ್ಲಿ ಕಾನೂನಿನ ಬಗ್ಗೆ ಜಾಗೃತಿ: ಕುಮಾರಚಂದ್ರ

ಉಡುಪಿ, ಅಗಸ್ಟ್ 3: ಮಕ್ಕಳಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಜಾಗೃತಿಯನ್ನು ಮೂಡಿಸುವುದೇ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮದ ಮುಖ್ಯ ಉದ್ಧೇಶ. ಇದರಿಂದ ಎಳವೇಯಲ್ಲಿಯೇ ಮಕ್ಕಳಿಗೆ ಪೊಲೀಸ್ ವೃತ್ತಿಗೆ ಸಂಬಂಧಪಟ್ಟಂತಹ ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡುತ್ತದೆ ಎಂದು ಎಎಸ್‍ಪಿ ಕುಮಾರ್‍ಚಂದ್ರ ಹೇಳಿದರು. ಅವರು ಶನಿವಾರ ಮಣಿಪಾಲದ ಪ್ರಗತಿನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಆಯೋಜಿಸಲಾದ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವುದು, ಮಹಿಳಾ ಸಶಕ್ತೀಕರಣಕ್ಕೆ ಒತ್ತು ನೀಡುವುದು, ಸಂವಿಧಾನಕ್ಕೆ ಧಕ್ಕೆ […]