ಆ.2: ಉಡುಪಿಯಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮ

ಉಡುಪಿ: ಚಿತ್ರದುರ್ಗ ಸಾಣೆಹಳ್ಳಿಯ ಶ್ರೀ ತರಳಬಾಳು ಜಗದ್ಗುರು ಶಾಖಾ ಮಠದ ಸಹಮತ ವೇದಿಕೆ ಮತ್ತು ಉಡುಪಿ ಬಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ರಾಜ್ಯಾದ್ಯಂತ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಆ.2ರಂದು ನಡೆಯಲಿದೆ ಎಂದು ಮತ್ತೆ ಕಲ್ಯಾಣ ಉಡುಪಿ ಸಂಯೋಜನ ಸಮಿತಿ ಅಧ್ಯಕ್ಷ ಯು.ಸಿ. ನಿರಂಜನ್‌ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾಂತಾವರ ಅಲ್ಲಮಪ್ರಭು ಪೀಠದ ನಿರ್ದೇಶಕ ಡಾ. ನಾ. ಮೊಗಸಾಲೆ,‌ ಬಾಲಕಿಯರ ಪಿಯು ಕಾಲೇಜು ಪ್ರಾಧ್ಯಾಪಕ ಜೆ.ಎಂ. ನಾಗರಾಜ […]

ಉಡುಪಿಯಲ್ಲಿ ಇಂದ್ರಾಣಿ ನದಿ ಉಳಿಸಿ ಬೃಹತ್ ಅಭಿಯಾನಕ್ಕೆ ಚಾಲನೆ, ಇಂದ್ರಾಣಿ ಶುದ್ಧವಾದರೆ ನಗರದ ಸಮಸ್ಯೆಗಳಿಗೆ ಪರಿಹಾರ: ಶ್ಯಾನ್ ಭಾಗ್

ಉಡುಪಿ ನಗರದಲ್ಲಿ ಇಂದ್ರಾಣಿ ನದಿಯ ಉಳಿವಿಗೆ ಪರಿಸರಾಸಕ್ತ ಯುವಕರ ತಂಡ ಹಮ್ಮಿಕೊಂಡ ಇಂದ್ರಾಣಿ ನದಿ ಉಳಿಸಿ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಇಂದ್ರಾಳಿ ಆಂಜನೇಯ ದೇವಳದ ಕೆರೆಯ ಬಳಿ ವಾಹನ ಜಾಥಕ್ಕೆ ಚಾಲನೆ ನೀಡಿದ ಮಾನವ ಹಕ್ಕು ರಕ್ಷಣಾ ಪ್ರತಿಷ್ಠಾನ ಅಧ್ಯಕ್ಷ ಡಾ. ರವೀಂದ್ರನಾಥ ಶ್ಯಾನ್ ಭಾಗ್ ಅವರು ಮಾತನಾಡಿ, ಇಂದ್ರಾಣಿ ನದಿ ಶುದ್ಧವಾದಲ್ಲಿ ನಗರದ ಹಲವು ಸಮಸ್ಯೆಗಳಿಗೆ ಪರಿಹಾರ ಲಭ್ಯವಾಗಲಿದೆ. ಹಿಂದೆ ಇಂದ್ರಾಣಿ ನದಿ ಉಗಮದಿಂದ ಕಡಲು ಸೇರುವ ಮೊದಲು 8 ದೇಗುಲಗಳ ಸರೋವರವನ್ನು ತುಂಬಿಕೊಂಡು […]

ಮೋಕೆದ ಸಿಂಗಾರಿ ಉಂತುದೆ ವಯ್ಯಾರಿ ಖ್ಯಾತಿಯ ಸಾಹಿತಿ ಸೀತಾರಾಮ ಕುಲಾಲ್ ವಿಧಿವಶ

ಮಂಗಳೂರು: ‘ಮೋಕೆದ ಸಿಂಗಾರಿ ಉಂತುದೆ ವಯ್ಯಾರಿ’, ‘ಪಕ್ಕಿಲು ಮೂಜಿ ಒಂಜೇ ಗೂಡುಡು ಬದ್ಕೊಂದುಂಡುಗೆ’ ಹೀಗೆ ತುಳುನಾಡಿನ ಜನತೆಯ ಮನಸ್ಸಲ್ಲಿ ಅಚ್ಚಳಿಯದೇ ಉಳಿಯುವ ಸೂಪರ್ ಹಿಟ್ ಹಾಡುಗಳನ್ನು ನೀಡಿದ ಹಿರಿಯ ತುಳು ಸಾಹಿತಿ, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಸೀತಾರಾಮ ಕುಲಾಲ್ ಭಾನುವಾರ ವಿಧಿವಶರಾಗಿದ್ದಾರೆ. ತುಳು ಸಾಹಿತ್ಯ ರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ ಅವರು, ಪರಶುರಾಮನ ಕೊಡಲಿಗ್ ಪುಟ್ಟಿನ ತುಳುನಾಡ್, ಬ್ರಹ್ಮನ ಬರವು ಮಾಜಂದೆ ಪೊಂಡಾ/ ಅಪ್ಪೆ ಮನಸ್ ಬಂಗಾರ ಅಮ್ಮ ತೆನಸು ಸಿಂಗಾರ, ಡಿಂಗಿರಿ ಮಾಮ […]

ಜನರ ಜೀವದ ಜತೆ ಬಿಜೆಪಿ ಶಾಸಕರ ಚೆಲ್ಲಾಟ: ರಮಾನಾಥ ರೈ 

ಮಂಗಳೂರು: ಅಧಿಕಾರದ ಮದದಲ್ಲಿ ಶಾಸಕರು ಕಾಲಹರಣ ನಡೆಸುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸುತ್ತಿಲ್ಲ. ಜನರ ಜೀವನದ ಜತೆ ಜನಪ್ರತಿನಿಧಿಗಳು ಚೆಲ್ಲಾಟ ಆಡುತ್ತಿದ್ದಾರೆ. ಜನಪ್ರತಿನಿಧಿಗಳ ನಿಷ್ಕ್ರಿಯತೆಯನ್ನು ಖಂಡಿಸುತ್ತೇನೆ ಎಂದು ಮಾಜಿ ಸಚಿವ ರಮಾನಾಥ ರೈ‌ ಬಿಜೆಪಿ ಶಾಸಕರ ವಿರುದ್ಧ ಕಿಡಿ ಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಸಾಂಕ್ರಾಮಿಕ ರೋಗಗಳನ್ನು ಯಾರು ತಡೆಗಟ್ಟಬೇಕು..? ಶಾಸಕರು ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದಲ್ಲಿ ಬ್ಯುಸಿ ಆಗಿದ್ದಾರೆ. ಇವರಿಗೆ ಜನರ ಕಾಳಜಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಮಲದ ಕುದುರೆ ಆಪರೇಶನ್: ಬಹುಮತ […]

ಡೆಂಗ್ಯೂ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ದಿನಕರ ಬಾಬು

ಉಡುಪಿ, ಜುಲೈ 26: ಡೆಂಗ್ಯೂ ನಿರ್ಮೂಲನೆಗೆ ಎಲ್ಲರೂ ಸ್ವ ಪ್ರೇರಣೆಯಿಂದ ಮುಂದೆ ಬಂದು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು. ಅವರು ಶುಕ್ರವಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಉಡುಪಿ, ಲಯನ್ಸ್ ಕ್ಷಬ್ ಬ್ರಹ್ಮಗಿರಿ ಉಡುಪಿ, ಪೂರ್ಣಪ್ರಜ್ಞ ಪದವಿ ಕಾಲೇಜು ಉಡುಪಿ, ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಮಣಿಪಾಲ ಇವರ ಸಂಯುಕ್ತ […]