ಆಟಿ ತಿಂಗಳ ಆಹಾರ ಔಷದೀಯ ಗುಣ ಹೊಂದಿದ್ದವು: ಸರಳಾ ಕಾಂಚನ್

ಉಡುಪಿ: ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿ ಸೇವಿಸುತ್ತಿದ್ದ ಆಹಾರಗಳು ಔಷಧಿಯ ಗುಣಗಳನ್ನು ಹೊಂದಿದ್ದವು. ಆದರೆ ಇಂದು ನಮ್ಮ ಮಕ್ಕಳು ಫಾಸ್ಟ್‌ಫುಡ್‌ಗಳನ್ನು ತಿನ್ನುತ್ತ ಆಟಿ ಆಹಾರವನ್ನು ಮರೆತು ಬಿಡುತ್ತಿದ್ದಾರೆ. ಹೀಗಾಗಿ ಆಟಿಯ ಆಹಾರಗಳ ಮಹತ್ವವನ್ನು ನಮ್ಮಮಕ್ಕಳಿಗೆ ತಿಳಿಸಿಕೊಡಬೇಕಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕಿ ಸರಳಾ ಕಾಂಚನ್ ಹೇಳಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ಭಾನುವಾರ ಆಯೋಜಿಸಿದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲ ಬದಲಾದಂತೆ ಮನುಷ್ಯನ ಜೀವನ ಶೈಲಿಯೂ ಬದಲಾಗುತ್ತಿದೆ. ಆದರೆ ಪ್ರಕೃತಿಗೆ ವಿರುದ್ಧವಾದ ಮನುಷ್ಯನ ಬದಲಾವಣೆ ಸಾಕಷ್ಟು ಪರಿಣಾಮವನ್ನು […]
ಮಂಗಳೂರು: ಶಂಕಿತ ಡೆಂಗ್ಯೂಗೆ ಮತ್ತೊಂದು ಬಲಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ಖಾಸಗಿ ಕಂಪೆನಿಯ ಮೇಲ್ವಿಚಾರಕರೊಬ್ಬರು ಬಲಿಯಾಗಿದ್ದಾರೆ. ನವೀನ್ ಚಂದ್ರ ಕದ್ರಿ (56), ಮೃತಪಟ್ಟವರು. ಅವರು ಆ್ಯಂಟನಿ ವೇಸ್ಟ್ ಎಂಬ ಕಂಪೆನಿಯ ಮಂಗಳೂರು ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತೀವ್ರ ಜ್ವರಕ್ಕೆ ತುತ್ತಾಗಿದ್ದ ನವೀನ್ ಚಂದ್ರ ವಾರದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಡೆಂಗ್ಯೂ ಬಾಧಿಸಿರುವುದು ಪತ್ತೆಯಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.
ಮಂಗಳೂರು: ಸಾಂಕ್ರಮಿಕ ರೋಗಕ್ಕೆ ಆಹ್ವಾನ: 5000 ರೂ. ದಂಡ

ಮಂಗಳೂರು: ಡೆಂಗ್ಯು ಸೇರಿದಂತೆ ಸಾಂಕ್ರಾಮಿಕ ರೋಗ ಹರಡುವ ಜೀವಿಗಳಿಗೆ ಆಸ್ಪದ ನೀಡುವ ಅಂಗಡಿ ಮನೆ, ನಿರ್ಮಾಣ ಹಂತದ ಕಟ್ಟಡಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಮಹಾನಗರಪಾಲಿಕೆ ಅಧಿಕಾರಿಗಳು, ಶನಿವಾರ ಹಳೇ ಟಯರ್‍ಗಳಲ್ಲಿ ನೀರು ನಿಂತು ರೋಗಕ್ಕೆ ಆಹ್ವಾನ ನೀಡುತ್ತಿದ್ದ ವ್ಯಕ್ತಿಗೆ ರೂ. 5000 ದಂಡ ವಿಧಿಸಿದೆ. ಕಣ್ಣೂರು ಕೆಫೆಕಾರ್ಟ್ ಸಂಸ್ಥೆಯ ಮಾಲಕ ನಿಶಾನ್ ಚಂದ್ರ ಎಂಬವರು ತನ್ನ ಆವರಣದಲ್ಲಿ ಹಳೆಯ ಟಯರ್‍ಗಳನ್ನು ಇಟ್ಟಿದ್ದು, ಇದರಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳ ಉತ್ಪತ್ತಿಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ […]
ಹಿರಿಯಡಕ: ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಉಡುಪಿ, ಜುಲೈ 19: ವಿದ್ಯಾರ್ಥಿಗಳು ತಮ್ಮ ಅಮೂಲ್ಯ ವಿದ್ಯಾರ್ಥಿ ಜೀವನವನ್ನು ಅಧ್ಯಯನ ಶೀಲತೆಯ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಸಾಫಲ್ಯ ಟ್ರಸ್ಟ್ ನ ಅಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಅವಿಭಜಿತ ದಕ್ಷಣ ಕನ್ನಡ ಜಿಲ್ಲೆಯ ನೂತನ ಸಮಾಜ ಸೇವಾ ಸಂಸ್ಥೆ “ಸಾಫಲ್ಯ ಟ್ರಸ್ಟ್” ವತಿಯಿಂದ ಕೊಡುಗೆಯಾಗಿ ನೀಡಿರುವ ಆಧುನಿಕ “ಶುದ್ಧ ಕುಡಿಯುವ ನೀರಿನ ಘಟಕ”ವನ್ನು ಉದ್ಘಾಟಿಸಿ, ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಾಫಲ್ಯ ಟ್ರಸ್ಟ್‍ನ ಕಾರ್ಯದರ್ಶಿ […]
ತೆಂಕನಿಡಿಯೂರು ಕಾಲೇಜಿನಲ್ಲಿ ಇತಿಹಾಸ ಎಂ.ಎ. ಉದ್ಘಾಟನೆ

ಉಡುಪಿ, ಜುಲೈ 19: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಇಲ್ಲಿ ಇತಿಹಾಸ ಸ್ನಾತಕೋತ್ತರ ಅಧ್ಯಯನ ಜುಲೈ 17 ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜನಾರ್ಧನ ತೋನ್ಸೆ ನೆರವೇರಿಸಿ ಶುಭ ಹಾರೈಸಿದರು. ಶಿರ್ವ ಸೈಂಟ್ ಮೆರೀಸ್ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜನ್ ಮಾತನಾಡಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಸತತ ಅಧ್ಯಯನ ಶೀಲರಾದರೆ ಯಶಸ್ಸು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ […]