ನಿಷ್ಪಕ್ಷಪಾತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಅಧಿಕಾರಿಗಳು ಚುನಾವಣಾ ಆಯೋಗ ಸೂಚಿಸುವ ನಿಯಮಗಳನ್ನು ತಪ್ಪದೇ ಪಾಲಿಸಬೇಕು– ಮುಖೇಶ್ ತಾರಾಚಂದ್ ಥಕ್ವಾನಿ

ಉಡುಪಿ: ವಿಧಾನಸಭಾ ಚುನಾವಣೆಯು ನಿಷ್ಪಕ್ಷಪಾತ ಮತ್ತು ನ್ಯಾಯ ಸಮ್ಮತವಾಗಿ ನಡೆಯುವಂತೆ ಅಧಿಕಾರಿಗಳು ಚುನಾವಣಾ ಆಯೋಗ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಭಾರತೀಯ ಕಂದಾಯ ಸೇವೆಯ ಅಧಿಕಾರಿ ಹಾಗೂ ವೆಚ್ಚ ವೀಕ್ಷಕರಾದ ಮುಖೇಶ್ ತಾರಾಚಂದ್ ಥಕ್ವಾನಿ ಅವರು ತಿಳಿಸಿದರು. ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವೆಚ್ಚ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಚುನಾವಣೆಗೆ ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಬಗ್ಗೆ ನಿಗಾ ವಹಿಸಬೇಕು, ರಜ್ಯ ಚುನಾವಣಾ ಆಯೋಗ ಈ ಸಂಬAದ […]