ಹುಟ್ಟಿದ ದಿನದಂದೇ ನಿಧನರಾದ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ

ಉದ್ಯಾವರ : ಹಿರಿಯ ಕಾಂಗ್ರೆಸ್ ಕಾರ್ಯಕರ್ತೆ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಉದ್ಯಾವರ ಅಂಕುದ್ರು ನಿವಾಸಿ ಸರಾಳ ಕೋಟ್ಯಾನ್ ಅಲ್ಪ ಕಾಲದ ಅಸೌಖ್ಯದಿಂದ ಇಂದು (ಅಕ್ಟೋಬರ್ 26) ಮುಂಜಾನೆ ನಿಧನರಾದರು. 40ಕ್ಕೂ ಅಧಿಕ ವರ್ಷ ಗ್ರಾಮೀಣ ಕಾಂಗ್ರೆಸ್ ಪದಾಧಿಕಾರಿಯಾಗಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ್ದ ಇವರು, ಎರಡು ಬಾರಿ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಒಂದು ಅವಧಿಗೆ ಕೆಎಫ್’ಡಿಸಿ ಸದಸ್ಯರಾಗಿಯೂ, 1995 -98 ಅವರಿಗೆ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿಯೂ ಜನಮನ್ನಣೆ ಗಳಿಸಿದ್ದರು. ಅತ್ಯಂತ ಸರಳ […]